ದೇಶ

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!

ದಿಢೀರ್ ವಿದ್ಯಮಾನವೊಂದರಲ್ಲಿ ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ವಿಜಯ್ ರೂಪಾಯಿ ಅವರ ರಾಜೀನಾಮೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!
ವಿಜಯ್ ರೂಪಾನಿ
Published On :

ಗಾಂಧಿನಗರ: ದಿಢೀರ್ ವಿದ್ಯಮಾನವೊಂದರಲ್ಲಿ  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.  ಆದರೆ, ಇದಕ್ಕೆ ಏನು ಕಾರಣ ಎಂಬುದನ್ನು  ಬಹಿರಂಗಪಡಿಸಲಿಲ್ಲ.

ಉತ್ತರಾಖಂಡದ ತಿರಾತ್ ಸಿಂಗ್ ರಾವತ್ , ಕರ್ನಾಟಕದ ಬಿ.ಎಸ್. ಯಡಿಯೂರಪ್ಪ ನಂತರ ಈ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೂರನೇ ಮುಖ್ಯಮಂತ್ರಿ  ವಿಜಯ್ ರೂಪಾನಿ ಆಗಿದ್ದಾರೆ. 

2016 ಆಗಸ್ಟ್ ಏಳರಿಂದ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಪಶ್ಟಿಮ ರಾಜ್ ಕೋಟ್  ಕ್ಷೇತ್ರದಿಂದ ಗುಜರಾತ್ ವಿಧಾನಸಭೆಯ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.