ದೇಶ

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ
ಭೂಪೇಂದ್ರ ಪಟೇಲ್
Published On :

ಅಹಮದಾಬಾದ್:  ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಪಾಲ್ಗೊಂಡಿದ್ದರು. ವಿಜಯ್ ರೂಪಾನಿ ನಿನ್ನೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪಟೇಲ್ ಘಾಟ್ ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸುತ್ತಿದ್ದರು. ಪಟೇಲ್ ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.