ಸೇಲಂ: ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾದ 19 ವರ್ಷ ವಿದ್ಯಾರ್ಥಿ
19 ವರ್ಷದ ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಸೇಲಂ: 19 ವರ್ಷದ ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಎಸ್ ಧನುಷ್(19) ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೇಲಂನ ಮೆಟ್ಟೂರು ಸಮೀಪದ ಕೂಝೈಯೂರ್ ನಿವಾಸಿ ಧನುಷ್ ಈ ಮೊದಲು ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದರು. ಆದರೆ ವೈದ್ಯಕೀಯ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಹಾಗಾಗಿ, ಅವರು ಭಾನುವಾರ ನಿಗದಿಯಾಗಿದ್ದ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಧನುಷ್ ಮೇಚೇರಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಮತ್ತೆ ನೀಟ್ ಪರೀಕ್ಷೆಯಲ್ಲಿ ಫೇಲ್ ಆಗಬಹುದು ಎಂಬ ಆತಂಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಧನುಷ್ ಪರೀಕ್ಷೆಗೆ ಗಂಭೀರವಾಗಿ ಮತ್ತು ಧೈರ್ಯದಿಂದ ತಯಾರಿ ನಡೆಸುತ್ತಿದ್ದ. "ಆದರೆ, ಇತ್ತೀಚಿನ ದಿನಗಳಲ್ಲಿ, ಅವನು ಪರೀಕ್ಷೆಯ ಬಗ್ಗೆ ಭಯ ಹೊಂದಿದ್ದನು ಮತ್ತು ಅದರಲ್ಲಿ ಯಶಸ್ವಿಯಾಗುತ್ತೇನೋ ಇಲ್ಲ ಎಂಬ ಕೊರಗ ಆತನನನ್ನು ಕಾಡುತ್ತಿತ್ತು. ನಿನ್ನೆ ರಾತ್ರಿಯೂ ಸಹ, ನಾವು ಅವನನ್ನು ಚೆನ್ನಾಗಿ ಬರೆಯುವಂತೆ ಪ್ರೋತ್ಸಾಹಿಸಿದ್ದೆವು ಎಂದು ಎಂಜಿನಿಯರಿಂಗ್ ಪದವೀಧರಾಗಿರುವ ಧನುಷ್ ಒಡಹುಟ್ಟಿದ ಸಹೋದರ ನಿಶಾಂತ್ ಹೇಳಿದ್ದಾರೆ.
ದುರದೃಷ್ಟವಶಾತ್, ಭಾನುವಾರ ಮುಂಜಾನೆ, ಧನುಷ್ ತನ್ನ ಕೋಣೆಯಲ್ಲಿ ಮೃತಪಟ್ಟಿರುವುದನ್ನು ನಾವು ನೋಡಿದೇವು ಎಂದು ನಿಶಾಂತ್ ತಿಳಿಸಿದ್ದಾರೆ.
ಕರುಮಲೈಕೂಡಲ್ ಪೊಲೀಸರು ಧನುಷ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನೀಟ್ ಪರೀಕ್ಷೆಗೆ ಯಲ್ಲಿಡುಗ ಸ್ವಲ್ಪ ಸಮಯ ಆತಂಕದಲ್ಲಿದ್ದ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


