ದೇಶ

ಕಾಶ್ಮೀರ: ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಸಾವು, ಉಗ್ರನೋರ್ವನನ್ನು ಹೊಡೆದುರುಳಿಸಿದ ಸೇನೆ

ಖನ್ಯಾರ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಅರ್ಷಿದ್ ಅಶ್ರಫ್ ಹುತಾತ್ಮರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆ ಮತ್ತು ಪೊಲೀಸರು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.

ಕಾಶ್ಮೀರ: ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಸಾವು, ಉಗ್ರನೋರ್ವನನ್ನು ಹೊಡೆದುರುಳಿಸಿದ ಸೇನೆ
ಭಯೋತ್ಪಾದಕ
Published On :

ಶ್ರೀನಗರ: ಖನ್ಯಾರ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಅರ್ಷಿದ್ ಅಶ್ರಫ್ ಹುತಾತ್ಮರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆ ಮತ್ತು ಪೊಲೀಸರು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.

ಖನ್ಯಾರ್‌ನಲ್ಲಿ ಭಯೋತ್ಪಾದಕರು ಪೋಲಿಸ್ ನಾಕಾ ಪಾರ್ಟಿಯ ಮೇಲೆ ಗುಂಡು ಹಾರಿಸಿದರು. ದಾಳಿಯಲ್ಲಿ ಖನ್ಯಾರ್‌ನ ಪಿಎಸ್‌ಐ(ಪ್ರೊಬೇಷನರಿ ಸಬ್ ಇನ್ಸ್‌ಪೆಕ್ಟರ್) ಅರ್ಷಿದ್ ಅಹ್ಮದ್ ಅವರು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಲ್ಲಿನ ಎಸ್‌ಎಮ್‌ಎಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಶ್ರಫ್ ಮೃತಪಟ್ಟಿದ್ದಾರೆ.

ಇದಾದ ನಂತರ ಭದ್ರತಾ ಪಡೆ ಇಡೀ ಪ್ರದೇಶವನ್ನು ಸುತ್ತುವರಿದಿತ್ತು. ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದು ಆ ವೇಳೆ ಅಪರಿಚಿತ ಉಗ್ರನನ್ನು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.