ತ್ರಿವರ್ಣ ಧ್ವಜಕ್ಕೆ ಅಪಮಾನ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಜಾಫರ್‌ನಗರ (ಬಿಹಾರ): ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.
ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜದ ಮೇಲೆ ಅಧ್ಯಕ್ಷರು ಬಿಜೆಪಿ ಧ್ವಜವನ್ನು ಇಟ್ಟಿದ್ದು ಅವರು ತ್ರಿವರ್ಣ ಧ್ವಜಕ್ಕೆ ಮಾಡಿದ ಅಗೌರವ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಮುಜಾಫರ್‌ಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
'ಉದ್ದೇಶಪೂರ್ವಕವಾಗಿ ಬಿಜೆಪಿ ಇದನ್ನು ಮಾಡಿದೆ. ನಡ್ಡಾ ಅವರ ಈ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ" ಎಂದು ಅರ್ಜಿದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಇದಕ್ಕೆ ಸಂಬಂಧಪಟ್ಟ ಕೆಲ ಚಿತ್ರಗಳನ್ನು ಸಹ ಸಲ್ಲಿಸಿದ್ದಾರೆ. ಇನ್ನು ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಕುರಿತು ದಿನಾಂಕ ನಿಗದಿಪಡಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


