ಜನರು ಮಾತೃಭಾಷೆಯೊಂದಿಗೆ ಹಿಂದಿಯನ್ನೂ ಕಲಿಯಬೇಕು: ಅಮಿತ್ ಶಾ
ಆತ್ಮ ನಿರ್ಭರ ಎಂದರೆ ದೇಶದಲ್ಲಿಯೇ ಉತ್ಪಾದನೆ ಮಾಡುವುದು ಮಾತ್ರವಲ್ಲ, ಭಾಷೆಯ ವಿಷಯದಲ್ಲೂ ನಾವು ಸ್ವಾವಲಂಭಿಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಕರೆ ನೀಡಿದ್ದಾರೆ.

ನವದೆಹಲಿ: ಆತ್ಮ ನಿರ್ಭರ ಎಂದರೆ ದೇಶದಲ್ಲಿಯೇ ಉತ್ಪಾದನೆ ಮಾಡುವುದು ಮಾತ್ರವಲ್ಲ, ಭಾಷೆಯ ವಿಷಯದಲ್ಲೂ ನಾವು ಸ್ವಾವಲಂಭಿಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಕರೆ ನೀಡಿದ್ದಾರೆ.
ನವದೆಹಲಿ ವಿಜ್ಞಾನ ಭವನದಲ್ಲಿಂದು “ಹಿಂದಿ ದಿವಸ್‌ಸಮಾರಂಭ 2021”ದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಪ್ರಧಾನಿಗಳು ಅಂತರಾಷ್ಟೀಯ ಮಟ್ಟದಲ್ಲಿ ಹಿಂದಿಯಲ್ಲಿ ಮಾತನಾಡಿದರೆ ಮುಜುಗರ ಪಡುವಂತಹ ದಿನಗಳು ಈಗಿಲ್ಲ. ಹಿಂದಿಯಲ್ಲಿ ಮಾತನಾಡುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.
ಜನರು ತಮ್ಮ ಮಾತೃಭಾಷೆಯೊಂದಿಗೆ ಅಧಿಕೃತ ಭಾಷೆಯಾಗಿ ಹಿಂದಿಯನ್ನು ಹಂತ ಹಂತವಾಗಿ ಬಳಸುವ ಪ್ರತಿಜ್ಞೆ ಮಾಡಬೇಕು. ಮಾತೃ ಬಾಷೆ ಹಾಗೂ ಅಧಿಕೃತ ಭಾಷೆಗಳ ಸಮನ್ವಯದಲ್ಲಿ ದೇಶದ ಅಭಿವೃದ್ದಿ ಅಡಗಿದೆ ಎಂದರು.
ಇದನ್ನು ಓದಿ: ಅಮಿತ್ ಶಾ ಹೇಳಿಕೆ ತಂದ ಸಂಚಲನ! (ನೇರ ನೋಟ)
ಭಾವನೆಗಳನ್ನು ವ್ಯಕ್ತಪಡಿಸಲು ಭಾಷೆ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದ್ದು, ಸಾಂಸ್ಕತಿಕ ಪ್ರಜ್ಞೆ ಹಾಗೂ ರಾಷ್ಟ್ರೀಯ ಏಕತೆಯ ಮೂಲ ಆಧಾರವಾಗಿರುವ ಹಿಂದಿಯು ಪ್ರಾಚೀನ ನಾಗರೀಕತೆ ಹಾಗೂ ಆಧುನಿಕ ಪ್ರಗತಿಯ ನಡುವೆ ಸೇತುವೆಯಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಸರ್ಕಾರ ಹಿಂದಿ ಹಾಗೂ ಎಲ್ಲ ಭಾರತೀಯ ಭಾಷೆಗಳ ಸಮಾನಂತರ ಅಭಿವೃದ್ದಿಗೆ ನಿರಂತರ ಬದ್ದವಾಗಿದ್ದೇವೆ ಎಂದು ಹೇಳಿದರು.
ಭಾರತ ಹಲವು ಭಾಷೆಗಳ ದೇಶವಾಗಿದೆ. ಪ್ರತಿಭಾಷೆಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಆದರೆ ಪ್ರಪಂಚದಲ್ಲಿ ಭಾರತದ ಗುರುತಾಗಬೇಕಿರುವ ಭಾಷೆಯನ್ನು ಹೊಂದಿರುವುದು ಬಹಳ ಮುಖ್ಯ ಎಂದು ಅವರು ಒತ್ತಿ ಹೇಳಿದರು. ಅಲ್ಲದೆ ಒಂದು ಭಾಷೆ ಒಂದು ದೇಶವನ್ನು ಒಂದುಗೂಡಿಸಲು ಸಾಧ್ಯವಾಗುವುದಾದರೆ ಅದು ಹಿಂದಿಗೆ ಮಾತ್ರ ಸಾಧ್ಯ ಎಂದೂ ನುಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


