ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ರಾಮಘರ್: ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.
ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮತ್ತು ಟೀನೇಜ್ ಹುಡುಗ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ಪಾಟ್ನಾದವರಾಗಿದ್ದು, ಪೊಲೀಸರು ಅವರ ವಿಳಾಸ ಮತ್ತು ಇತರ ವಿವರಗಳನ್ನು ಪತ್ತೆ ಮಾಡುತ್ತಿದ್ದಾರೆ. ಘಟನೆಗೆ ಪೊಲೀಸರು ಕಾರಣ ಪತ್ತೆ ಹಚ್ಚುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


