ಫೇಕ್ ನ್ಯೂಸ್ ಮತ್ತು ಪ್ರತಿಭಟನೆಗಳಿಂದಾಗಿ ಕೊರೊನಾ ಕಾಲದಲ್ಲಿ ಭಾರತದ ಅಪರಾಧ ಪ್ರಮಾಣ ಶೇ.28 ಪ್ರತಿಶತ ಹೆಚ್ಚಳ
ರಕ್ತಪಾತವನ್ನೊಳಗೊಂಡ ಅಪರಾಧಗಳ ಪ್ರಮಾಣ ಕಡಿಮೆಯಾಗಿದ್ದರೂ ಫೇಕ್ ನ್ಯೂಸ್, ಕಲಬೆರಕೆ, ಪ್ರತಿಭಟನೆ ಪರಿಸರ ಕಾಯ್ದೆ ಉಲ್ಲಂಘನೆ, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಹೆಚ್ಚಳ.

ನವದೆಹಲಿ: ಕೊರೊನಾ ಸಮಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದುದರ ಹೊರತಾಗಿಯೂ ಅಪರಾಧ ಪ್ರಮಾಣ ಶೇ.28ರಷ್ಟು ಏರಿಕೆಯಾಗಿರುವುದಾಗಿ ರಾಷ್ಟ್ರೀಯ ಅಪರಾಧ ದಾಖಲೆ ಸಂಸ್ಥೆ (NCRB) ಬಹಿರಂಗಪಡಿಸಿದೆ.
ಅಪರಾಧಗಳಲ್ಲಿ ರಕ್ತಪಾತವನ್ನೊಳಗೊಂಡ ಅಪರಾಧಗಳ ಪ್ರಮಾಣ ಕಡಿಮೆಯಾಗಿದ್ದರೂ ಫೇಕ್ ನ್ಯೂಸ್, ಕಲಬೆರಕೆ, ಪ್ರತಿಭಟನೆ ಪರಿಸರ ಕಾಯ್ದೆ ಉಲ್ಲಂಘನೆ, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಹೆಚ್ಚಳವಾದ ಪರಿಣಾಮ ಒಟ್ಟು ಅಪರಾಧ ಪ್ರಮಾಣ ಏರಿಕೆ ಕಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2018ರಲ್ಲಿ 280 ಸುಳ್ಳು ಸುದ್ದಿ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ 1,527 ಸುಳ್ಳು ಸುದ್ದಿ ಪ್ರಕರಣಗಳು ದಾಖಲಾಗಿದ್ದವು. ಅಲ್ಲದೆ ಆತಂಕಕಾರಿ ಬೆಳವಣಿಗೆಯಲ್ಲಿ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದಲೂ ಕಲಬೆರಕೆ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿರುವುದು.
2018ರಲ್ಲಿ 49 ಕಲಬೆರಕೆ ಸಂಬಂಧಿ ದೂರುಗಳು ದಾಖಲಾಗಿದ್ದವು. ಕಳೆದ ವರ್ಷ 625 ಕಲಬೆರಕೆ ಸಂಬಂಧಿ ದೂರುಗಳು ದಾಖಲಾಗಿವೆ.
Related Article
ಸುಳ್ಳು ಸುದ್ದಿಯೊಂದಿಗೆ ಸಾಮಾಜಿಕ ಮಾಧ್ಯಮಗಳು 'ಜನರನ್ನು ಕೊಲ್ಲುತ್ತಿವೆ': ಬೈಡನ್
ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಕೊರೋನಾ ಲಸಿಕೆ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


