ಭೂಪೇಂದ್ರ ಪಟೇಲ್ ಸಂಪುಟ ವಿಸ್ತರಣೆ: ಗುಜರಾತ್ ನೂತನ ಸಚಿವರಾಗಿ 24 ಶಾಸಕರು ಪ್ರಮಾಣ
ಮಾಜಿ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಾಘಾನಿ ಸೇರಿದಂತೆ 24 ಶಾಸಕರು ಗುರುವಾರ ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಗಾಂಧಿನಗರ: ಮಾಜಿ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಾಘಾನಿ ಸೇರಿದಂತೆ 24 ಶಾಸಕರು ಗುರುವಾರ ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಂಪುಟದಲ್ಲಿದ್ದ ಯಾವುದೇ ಸಚಿವರಿಗೆ ಈ ಬಾರಿ ಅವಕಾಶ ನೀಡಿಲ್ಲ.
ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು 10 ಶಾಸಕರಿಗೆ ಸಂಪುಟ ದರ್ಜೆ ಸಚಿವರಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ 24 ಮಂದಿಗೆ ಪ್ರಮಾಣವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಳೆದ ಸೋಮವಾರ ರಾಜ್ಯದ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಹಾಗೂ ಕಳೆದ ಶನಿವಾರ ಸಿಎಂ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದ ವಿಜಯ್ ರೂಪಾನಿ ಅವರು ಹಾಜರಿದ್ದರು.
ರಾಜೇಂದ್ರ ತ್ರಿವೇದಿ, ಜಿತು ವಾಘನಿ, ಋಷಿಕೇಶ್ ಪಟೇಲ್, ಪೂರ್ಣೇಶ್ ಮೋದಿ, ರಾಘವಜಿ ಪಟೇಲ್, ಕಾನುಭಾಯಿ ದೇಸಾಯಿ, ಕಿರಿತ್ಸಿನ್ ರಾಣಾ, ನರೇಶ್ ಪಟೇಲ್, ಪ್ರದೀಪ್ ಪರ್ಮಾರ್ ಮತ್ತು ಅರ್ಜುನ್ ಸಿಂಗ್ ಚೌಹಾಣ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


