ದೇಶ

ಮಹಾರಾಷ್ಟ್ರ ದೋಣಿ ದುರಂತ: 7 ಮಂದಿ ಮೃತದೇಹ ಪತ್ತೆ, ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ದೋಣಿ ದುರಂತ: 7 ಮಂದಿ ಮೃತದೇಹ ಪತ್ತೆ, ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ 13 ಮಂದಿಯಿಂದ ದೋಣಿಯೊಂದು ಮುಳುಗಿತ್ತು. ಘಟನೆ ವೇಳೆ ಇಬ್ಬರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು. 

ಘಟನೆ ಬಳಿಕ ಪೋಲಿಸ್ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡಗಳು ಕಾರ್ಯಾಚರಣೆ ನಡೆಸಿ ಮೂರು ಮೃತದೇಹಗಳನ್ನು ಹೊರತೆಗೆದಿದ್ದರು. ಉಳಿದವರಿಗಾಗಿ ಕಾರ್ಯಾಚರಣೆ ಮುಂದುವರೆದಿತ್ತು. ಇದರಂತೆ ಇಂದು  7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, 11 ವರ್ಷದ ಬಾಲಕಿ ಇನ್ನೂ ಪತ್ತೆಯಾಗಿಲ್ಲ. 

ಘಟನೆಯಲ್ಲಿ ಮೃತಪಟ್ಟಿರುವ 10 ಮಂದಿಯಲ್ಲಿ 7 ಮಂದಿ ಮಹಿಳೆಯರಾಗಿದ್ದು, ಮೂವರು ಪುರುಷರಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ 10: 30 ರ ಸುಮಾರಿಗೆ ಈ ಘಟನೆ ನಡೆದಿತ್ತು. ಮೂರು ಕುಟುಂಬಗಳ 13 ಜನರನ್ನು ಹೊತ್ತ ದೋಣಿ ನದಿಯಲ್ಲಿ ಮಗುಚಿ ಬಿದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.