ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.
ಅಶ್ಲೀಲ ಚಿತ್ರ ಪ್ರಕರಣ ವಿಚಾರವಾಗಿ ತನಿಖೆ ನಡೆಸುತ್ತಿರುವ ಮುಂಬೈ ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಬುಧವಾರ 1500 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಎಸ್ ಪ್ಲನೇಡ್ ನ್ಯಾಯಾಲಯಕ್ಕೆ (Esplanade Court) ಸಲ್ಲಿಸಿದ್ದು, ಈ ಚಾರ್ಜ್ ಶೀಟ್ ನಲ್ಲಿ ರಾಜ್ ಕುಂದ್ರಾ ಪತ್ನಿ ಶಿಲ್ಪಾಶೆಟ್ಟಿ ಮತ್ತು ಈ ಹಿಂದೆ ಕಾಮಸೂತ್ರ 3ಡಿ ಚಿತ್ರದ ನಟಿ ಶೆರ್ಲಿನ್ ಚೋಪ್ರಾ, ಸೆಜಲ್ ಶಾ, ಹಲವು ಮಾಡೆಲ್ಗಳು ಸೇರಿದಂತೆ ಸುಮಾರು 43 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕುಂದ್ರಾ ಕಂಪನಿಯ ಉದ್ಯೋಗಿಗಳ ಹೇಳಿಕೆಗಳನ್ನೂ ಆರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪ ಪಟ್ಟಿಯಲ್ಲಿ ಪ್ರಕರಣದಲ್ಲಿ ಬೇಕಾಗಿರುವ ಇಬ್ಬರು ಆರೋಪಿಗಳ ಹೆಸರೂ ಇದೆ ಎನ್ನಲಾಗಿದೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳನ್ನು ನಿರ್ಮಿಸುತ್ತಿರುವ ಆರೋಪದಲ್ಲಿ ಜುಲೈ 19ರಂದು ಇತರ 11 ಮಂದಿಯೊಂದಿಗೆ ಬಂಧಿಸಲಾಗಿತ್ತು.
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾರನ್ನು ಜುಲೈನಲ್ಲಿ ಬಂಧಿಸಲಾಯಿತು. ಸಿಂಗಪುರದ ನಿವಾಸಿಯಾದ ಯಶ್ ಠಾಕೂರ್ ಮತ್ತು ಲಂಡನ್ ಮೂಲದ ಪ್ರದೀಪ್ ಬಕ್ಷಿ ಅವರನ್ನು ಇನ್ನಿಬ್ಬರು ಆರೋಪಿಗಳೆಂದು ಆರೋಪ ಪಟ್ಟಿಯಲ್ಲಿ ತೋರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


