ದೇಶ

ಪ್ರಧಾನಿ ಮೋದಿ ಹುಟ್ಟುಹಬ್ಬದಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 2.50 ಕೋಟಿ ಮಂದಿಗೆ ಕೋವಿಡ್ ಲಸಿಕೆ!

ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಪ್ರಧಾನಿ ಮೋದಿ ಹುಟ್ಟುಹಬ್ಬದಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 2.50 ಕೋಟಿ ಮಂದಿಗೆ ಕೋವಿಡ್ ಲಸಿಕೆ!
ಮೋದಿ
Published On :

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡೂವರೆ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.

ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12ರವರೆಗೆ ದೇಶದಲ್ಲಿ 2,50,10,112 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 79.33 ಕೋಟಿ ಡೋಸ್ ತಲುಪಿದೆ.

ಇದಕ್ಕು ಮುನ್ನ ಭಾರತೀಯ ಜನತಾ ಪಕ್ಷ(ಬಿಜೆಪಿ) ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು ದೇಶದಲ್ಲಿ ಗರಿಷ್ಠ ಸಂಖ್ಯೆಯ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಸುವುದಾಗಿ ಹೇಳಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.