ಪ್ಯಾನ್-ಆಧಾರ್ ಜೋಡಣೆಗೆ ಇದ್ದ ಗಡುವು 2022 ಮಾರ್ಚ್‌ವರೆಗೂ ವಿಸ್ತರಣೆ
ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ 2022ರ ಮಾರ್ಚ್‌ವರೆಗೂ ವಿಸ್ತರಣೆ ಮಾಡಿದೆ.

ನವದೆಹಲಿ: ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ 2022ರ ಮಾರ್ಚ್‌ವರೆಗೂ ವಿಸ್ತರಣೆ ಮಾಡಿದೆ.
ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್-ಪ್ಯಾನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಹೇಳಿದೆ.
ಅಲ್ಲದೆ, ಐ-ಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ.
ಬೇನಾಮಿ ಆಸ್ತಿ ವಹಿವಾಟು ನಿಷೇಧ ಕಾಯ್ದೆ 1988ರ ಅಡಿಯಲ್ಲಿ ಅಧಿಸೂಚನೆ ಪ್ರಾಧಿಕಾರದಿಂದ ಸೂಚನೆ ನೀಡುವ ಮತ್ತು ಆದೇಶವನ್ನು ರವಾನಿಸುವ ಸಮಯದ ಮಿತಿಯನ್ನು ಮಾರ್ಚ್ 2022 ಕ್ಕೆ ವಿಸ್ತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


