ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಎಂಟು ಹೆಸರು ಶಿಫಾರಸು
ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ...

ನವದೆಹಲಿ: ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸು ಮಾಡಿದೆ.
ಗುರುವಾರ ಮತ್ತು ಶುಕ್ರವಾರ ನಡೆದ ಕೊಲಿಜಿಯಂ ಮ್ಯಾರಥಾನ್ ಸಭೆಯಲ್ಲಿ ವಿವಿಧ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಕಿಲ್ ಕುರೇಶಿ ಹಾಗೂ ಇತರ 28 ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಐವರು ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಗೂ ಶಿಫಾರಸು ಮಾಡಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳು ಪಿಟಿಐಗೆ ತಿಳಿಸಿವೆ.
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಂದಾಲ್ ಅವರು ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ರಾಜಕೀಯ ನಿಲುವಿಗೆ ಸಂಬಂಧಿಸಿದಂತೆ ತಮ್ಮ ಆಡಳಿತಾತ್ಮಕ ಮತ್ತು ನ್ಯಾಯಾಂಗ ನಿರ್ಧಾರಗಳಿಂದಾಗಿ ಸುದ್ದಿಯಾಗಿದ್ದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಮೂವರು ಸದಸ್ಯರ ಕೊಲಿಜಿಯಂ, ಮಧ್ಯಪ್ರದೇಶ, ಅಲಹಾಬಾದ್, ಕಲ್ಕತ್ತಾ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮೇಘಾಲಯ, ಗುಜರಾತ್ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


