ದೇಶ

ನೀಟ್ ಕೋಚಿಂಗ್ ಸೆಂಟರ್ ನಡೆಸಿದ್ದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ವಿಫಲ; ವಿದ್ಯಾರ್ಥಿ ಆತ್ಮಹತ್ಯೆ 

ಖಾಸಗಿ ನೀಟ್, ಜೆಇಇ ಕೋಚಿಂಗ್ ಸೆಂಟರ್ ನಡೆಸುವ ಸ್ಕಾಲರ್ ಶಿಪ್ ಪರೀಕ್ಷೆ ಬರೆದಿದ್ದ ಹನ್ನೊಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮಗನೊಬ್ಬ ಉತ್ತಮ ಅಂಕ ಗಳಿಸುವಲ್ಲಿ ವಿಫಲನಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೀಟ್ ಕೋಚಿಂಗ್ ಸೆಂಟರ್ ನಡೆಸಿದ್ದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ವಿಫಲ; ವಿದ್ಯಾರ್ಥಿ ಆತ್ಮಹತ್ಯೆ 
ಸಾಂದರ್ಭಿಕ ಚಿತ್ರ
Published On :

ಕೊಯಮತ್ತೂರು: ಖಾಸಗಿ ನೀಟ್, ಜೆಇಇ ಕೋಚಿಂಗ್ ಸೆಂಟರ್ ನಡೆಸುವ ಸ್ಕಾಲರ್ ಶಿಪ್ ಪರೀಕ್ಷೆ ಬರೆದಿದ್ದ ಹನ್ನೊಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಪ್ರೊಫೆಸರ್  ಮಗನೊಬ್ಬ ಉತ್ತಮ ಅಂಕ ಗಳಿಸುವಲ್ಲಿ ವಿಫಲನಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೀಟ್ ಮತ್ತು ಜೆಇಇ ಯಂತಹ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಗೆ ಕೋಚಿಂಗ್ ನಡೆಸುತ್ತಿದ್ದ ಖಾಸಗಿ ಸಂಸ್ಥೆಯಲ್ಲಿ ಎರಡು ವರ್ಷಗಳ ಕಾಲ ಸೀಟ್ ಪಡೆಯುವ ಸ್ಕಾಲರ್ ಶಿಪ್ ಪರೀಕ್ಷೆಗಾಗಿ ಆತ ಹಾಜರಾಗಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.

ಮೃತನನ್ನು ಎಂ ಧರುಣಶಂಕರ್ ಎಂದು ಗುರುತಿಸಲಾಗಿದೆ. ಈತ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಎಂ ಮುರುಗನ್ ಅವರ ಪುತ್ರನಾಗಿದ್ದು, ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಕ್ವಾರ್ಟಸ್ ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. 

ಕೋಚಿಂಗ್ ತರಗತಿಗೆ ಸೀಟ್ ಪಡೆಯಲು ಇತ್ತೀಚಿಗೆ ಖಾಸಗಿ ಸಂಸ್ಥೆ ನಡೆಸಿದ್ದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಧರುಣ ಶಂಕರ್ ಹಾಜರಾಗಿದ್ದ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವಲ್ಲಿ ವಿಫಲತೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ, ಪೋಷಕರು ಕೂಡಾ ಆತ ಗಳಿಸಿರುವ ಅಂಕಗಳ ಬಗ್ಗೆ ಪ್ರಶ್ನಿಸಿದ್ದರು ಎನ್ನಲಾಗಿದೆ. ಈ ಮಧ್ಯೆ ಶುಕ್ರವಾರ ರಾತ್ರಿ ಮನೆಯಲ್ಲಿ ಒಬ್ಬನೇ ಇರುವಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂದಿನ ತನಿಖೆ ಪ್ರಗತಿಯಲ್ಲಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಎಂಸಿಹೆಚ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾಯಿಬಾಬಾ ಕಾಲೋನಿ ಪೊಲೀಸರು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.