'ನನ್ನ ಕೈಲಾದಷ್ಟು ಮಾಡಿದ್ದೇನೆ, ಶೇ 89. 2 ರಷ್ಟು ಭರವಸೆ ಈಡೇರಿಸಿದ್ದೇನೆ'- ಸೋನಿಯಾಗೆ ಅಮರೀಂದರ್ ಸಿಂಗ್ ಪತ್ರ
ಪಂಜಾಬ್ ರಾಜ್ಯಪಾಲರಿಗೆ ಶನಿವಾರ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, ಕಳೆದ ಐದು ತಿಂಗಳ ರಾಜಕೀಯ ಘಟನೆಗಳಲ್ಲಿ ಅನುಭವಿಸಿರುವ ಯಾತನೆಯನ್ನು ವ್ಯಕ್ತಪಡಿಸಿದ್ದಾರೆ.

ಚಂಡೀಘಡ: ಪಂಜಾಬ್ ರಾಜ್ಯಪಾಲರಿಗೆ ಶನಿವಾರ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, ಕಳೆದ ಐದು ತಿಂಗಳ ರಾಜಕೀಯ ಘಟನೆಗಳಲ್ಲಿ ಅನುಭವಿಸಿರುವ ರಾಜಕೀಯ ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಪಂಜಾಬ್‌ನ ರಾಷ್ಟ್ರೀಯ ಅವಶ್ಯಕತೆಗಳು ಮತ್ತು ಅದರ ಪ್ರಮುಖ ಕಾಳಜಿಗಳ ಸಂಪೂರ್ಣ ತಿಳುವಳಿಕೆಯನ್ನು ಆಧರಿಸಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಘಟಕದಲ್ಲಿನ ರಾಜಕೀಯ ವಿದ್ಯಮಾನಗಳಿಂದ ಪಂಜಾಬ್ ನಲ್ಲಿ ಅಸ್ಥಿರತೆ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ನನ್ನ ವೈಯಕ್ತಿಕ ಯಾತನೆಯೊಂದಿಗೆ ರಾಜ್ಯದ ಅಭಿವೃದ್ಧಿ ಮತ್ತು ಶಾಂತಿಗೆ ಭಂಗ ತರುವುದಿಲ್ಲ ಎಂಬ ಭರವಸೆ ಇಟ್ಟುಕೊಂಡಿದ್ದೇನೆ. ಕಳೆದ ಕೆಲವು ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗಮನ ಕೇಂದ್ರೀಕರಿಸಿದ್ದಾಗಿ ಅವರು ತಿಳಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿಯಾಗಿ ತನ್ನ ಕೈಲಾದಷ್ಟು ಮತ್ತಿಗೆ ಉತ್ತಮ ರೀತಿಯಲ್ಲಿ ಜನರಿಗಾಗಿ ಕೆಲಸ ಮಾಡಿದ ತೃಪ್ತಿಯಿದೆ. ಅನೇಕ ಭೌಗೋಳಿಕ ರಾಜಕೀಯ ಮತ್ತಿತರ ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಯಾವುದರೊಂದಿಗೆ ರಾಜಿಯಿಲ್ಲದೆ ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದು, ಕೋಮುಸೌಹಾರ್ದತೆಯೊಂದಿಗೆ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಿರುವುದಾಗಿ ಅವರು ಹೇಳಿದ್ದಾರೆ.
ಕಳೆದ ನಾಲ್ಕುವರೆ ವರ್ಷಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದು, 2017ರ ವಿಧಾನಸಭಾ ಚುನಾವಣೆಯಲ್ಲಿ ನೀಡಲಾಗಿದ್ದ ಭರವಸೆಗಳಲ್ಲಿ ಶೇ. 89. 2 ರಷ್ಟನ್ನು ಪೂರ್ಣಗೊಳಿಸಿದ್ದು, ಉಳಿದ ಭರವಸೆಗಳ ಕೆಲಸ ಪ್ರಗತಿಯಲ್ಲಿರುವುದಾಗಿ ಅವರು ತಿಳಿಸಿದ್ದಾರೆ.
2015ರಲ್ಲಿ ನಡೆದಿದ್ದ ಸಿಖ್ ಗ್ರಂಥಗಳಿಗೆ ಅಪವಿತ್ರತೆ ಪ್ರಕರಣ ಮತ್ತು ನಂತರ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಸಂಬಂಧಿಸಿದ ತನಿಖೆಗಾಗಿ ನಿವೃತ್ತ ನ್ಯಾಯಾಧೀಶ ರಂಜಿತ್ ಸಿಂಗ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸಲಾಗಿದ್ದು, ಅದು ಆಗಸ್ಟ್ 16, 2018 ರಂದು ವರದಿ ನೀಡಿದ್ದು, ಸಂಪೂರ್ಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


