ದೇಶ

ತಮ್ಮ ಉಡುಗೊರೆ, ಸ್ಮರಣಿಕೆಗಳ ಹರಾಜಿನಲ್ಲಿ ಪಾಲ್ಗೊಳ್ಳಿ; ಜನತೆಗೆ ಪ್ರಧಾನಿ ಮೋದಿ ಕರೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ, ತಮಗೆ ದೊರೆತಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ.

ತಮ್ಮ ಉಡುಗೊರೆ, ಸ್ಮರಣಿಕೆಗಳ ಹರಾಜಿನಲ್ಲಿ ಪಾಲ್ಗೊಳ್ಳಿ; ಜನತೆಗೆ ಪ್ರಧಾನಿ ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ, ತಮಗೆ ದೊರೆತಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈ ಹರಾಜಿನಿಂದ ದೊರೆಯುವ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಬಳಸಲಾಗುವುದು ಎಂದಿದ್ದಾರೆ.

2014ರ ಜೂನ್ ನಲ್ಲಿ,  ಕೇಂದ್ರ ಸರ್ಕಾರ ಗಂಗಾ ನದಿ ಮತ್ತು ಅದರ ಉಪನದಿಗಳ ಸಂರಕ್ಷಣೆ ಮತ್ತು ಕಾಯಕಲ್ಪದ ಉದ್ದೇಶದಿಂದ 'ನಮಾಮಿ ಗಂಗೆ ಕಾರ್ಯಕ್ರಮ' ಆರಂಭಿಸಿತು.

ಟೋಕಿಯೊ ಒಲಂಪಿಕ್ಸ್ ಮತ್ತು ಟೊಕಿಯೋ ಪ್ಯಾರಾಲಿಂಪಿಕ್ಸ್ ವಿಜೇತರಿಂದ ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದ ಬಹುತೇಕ ಉಡುಗೊರೆ, ಸ್ಮರಣಿಕೆಗಳನ್ನು ಕೂಡಾ ಹರಾಜಿಲ್ಲಿ ಇರಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.