ದೇಶ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ
ಚರಣ್ ಜಿತ್ ಸಿಂಗ್ ಛನಿ ಪ್ರಮಾಣ ವಚನ ಸ್ವೀಕಾರದ ಚಿತ್ರ
Published On :

ಚಂಡೀಘಡ: ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.  

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಉಪಸ್ಥಿತರಿದ್ದರು. ಆದರೆ, ನಿರ್ಗಮಿತ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಮಾರಂಭದಲ್ಲಿ ಗೈರಾಗಿದ್ದರು. 

ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಚರಣ್ ಜಿತ್ ಸಿಂಗ್ ಛನಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದರು.

ರೂಪ್ ನಗರದ ಚಂಕೌರ್ ಸಾಹೀಬ್  ಕ್ಷೇತ್ರದ ಮೂರು ಬಾರಿ ಶಾಸಕರಾಗಿರುವ ಛನಿ, ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿದ್ದಾರೆ.  ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸರ್ಕಾರದ ಅವರು ತಾಂತ್ರಿಕ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.