ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶಿ ಗಣ್ಯರಿಂದ ಪಡೆದ ಉಡುಗೊರೆ ಉಳಿಸಿಕೊಳ್ಳಲು ಕೇಂದ್ರ ಅವಕಾಶ
ಐಎಎಸ್, ಐಪಿಎಸ್ ಮತ್ತು ಐಎಫ್‌ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.

ನವದೆಹಲಿ: ಐಎಎಸ್, ಐಪಿಎಸ್ ಮತ್ತು ಐಎಫ್‌ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.
ಈ ಸಂಬಂಧ 50 ವರ್ಷಗಳ ಹಳೆಯ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳು ಈ ಅಧಿಕಾರಿಗಳಿಗೆ ತಮ್ಮ ಹತ್ತಿರದ ಸಂಬಂಧಿಕರಿಂದ ಅಥವಾ ಅಧಿಕೃತ ವ್ಯವಹಾರಗಳಿಲ್ಲದ ವೈಯಕ್ತಿಕ ಸ್ನೇಹಿತರಿಂದ ಮದುವೆ, ವಾರ್ಷಿಕೋತ್ಸವಗಳು ಮತ್ತು ಇತರೆ ಧಾರ್ಮಿಕ ಕಾರ್ಯಗಳಂತಹ ಸಂದರ್ಭಗಳಲ್ಲಿ ಉಡುಗೊರೆಗಳನ್ನು ಸ್ವೀಕರಿಸಲು ಅವಕಾಶ ಇದೆ.
ಆದರೆ ಅಂತಹ ಉಡುಗೊರೆಯ ಮೌಲ್ಯವು 25,000 ರೂ.ಗಳನ್ನು ಮೀರಿದರೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿಯಮಗಳು ಹೇಳುತ್ತವೆ.
ಸಿಬ್ಬಂದಿ ಸಚಿವಾಲಯವು ಈಗ ಈ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಅಖಿಲ ಭಾರತ ಸೇವೆಗಳ(ನಡವಳಿಕೆ) ನಿಯಮಗಳು, 1968 ರ ಸೆಕ್ಷನ್ 11 ರ ಅಡಿಯಲ್ಲಿ ಹೊಸ ಉಪ ನಿಯಮವನ್ನು ಸೇರಿಸಿದೆ.
ಹೊಸ ಉಪ ನಿಯಮದ ಪ್ರಕಾರ, ಐಎಎಸ್, ಐಪಿಎಸ್ ಮತ್ತು ಐಎಫ್ ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿರುವುದು ಅಥವಾ ಇಲ್ಲದಿದ್ದರೆ ವಿದೇಶಿ ಗಣ್ಯರಿಂದ ಉಡುಗೊರೆಗಳನ್ನು ಸ್ವೀಕರಿಸಬಹುದು ಮತ್ತು ಅವುಗಳನ್ನು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


