ಓವೈಸಿ ಮನೆ ಮೇಲೆ ದಾಳಿ ಪ್ರಕರಣ ಸಂಬಂಧ ಐದು ಮಂದಿ ಬಂಧನ: ದೆಹಲಿ ಪೊಲೀಸ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.
ದೆಹಲಿಯ ಅಶೋಕ ರಸ್ತೆಯಲ್ಲಿರುವ ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸತ್ ಸದಸ್ಯನ ಮನೆಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ಐದು ಮಂದಿ ಹಿಂದೂ ಸೇನೆ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಶಾನ್ಯ ದೆಹಲಿಯ ಮಂಡೋಲಿ ಪ್ರದೇಶದ ನಿವಾಸಿಗಳಾದ ಐವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ (ನವದೆಹಲಿ ಜಿಲ್ಲೆ) ದೀಪಕ್ ಯಾದವ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ದೃಢ ಪಡಿಸಿದ್ದಾರೆ.
ಅವರ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


