ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ: ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ
ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇತ್ತೀಚೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ. ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂದು ಕಳವಳ ವ್ಯಕ್ತಪಡಿಸುವ ಯಾವುದೇ ದಾಖಲೆಗಳಾಗಲಿ, ಸಾಕ್ಷಿಗಳಾಗಲಿ ಸಿಕ್ಕಿಲ್ಲ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.
ಹಿಂದೂ ಧರ್ಮಕ್ಕೆ ಅಪಾಯವಿದೆ ಎಂಬ ಆಪಾದನೆ "ಕಾಲ್ಪನಿಕ" ಎಂದು ಕರೆಯುವ ಗೃಹ ಸಚಿವಾಲಯ, ಆಪಾದನೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ನಾಗ್ಪುರದ ಕಾರ್ಯಕರ್ತ ಮೊಹ್ನೀಶ್ ಜಬಲ್‌ಪುರೆ ಅವರು ಕಳೆದ ಆಗಸ್ಟ್ 31 ರಂದು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಸಚಿವಾಲಯ ಉತ್ತರಿಸಿದೆ, ಗೃಹ ಸಚಿವಾಲಯ ದೇಶದಲ್ಲಿ ಹಿಂದೂ ಧರ್ಮಕ್ಕೆ ಬೆದರಿಕೆಯಿದೆಯೆಂಬುದಕ್ಕೆ ಪುರಾವೆಗಳನ್ನು ತೋರಿಸಿ ಎಂದು ಕೇಳಿದ್ದರು.
ಅದಕ್ಕೆ ಗೃಹ ಸಚಿವಾಲಯ ಆಂತರಿಕ ಭದ್ರತೆ ಅಧಿಕಾರಿ ರಾಣಾ, ಜಬಲ್ಪುರೆಯ "ಕಾಲ್ಪನಿಕ" ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ, ಇದನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಪರಿಗಣಿಸಲಾಗಿದೆ ಎಂದಿದ್ದಾರೆ.
ಗೃಹ ಸಚಿವಾಲಯದ ಪ್ರಮುಖ ಕಾರ್ಯದರ್ಶಿಯೊಬ್ಬರು 'ಹಿಂದೂ ಧರ್ಮದ ಬೆದರಿಕೆಗಳಿಗೆ' ಸಂಬಂಧಿಸಿದ ಯಾವುದೇ ಪ್ರಶ್ನೆಯು ಕಾಲ್ಪನಿಕ ಎಂದು ಹೇಳಿರುವುದು ಇದೇ ಮೊದಲು. ಅಂತಹ ಯಾವುದೇ ಊಹೆಯನ್ನು ಬೆಂಬಲಿಸಲು ಯಾವುದೇ ದಾಖಲೆಗಳಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಬಲ್‌ಪುರೆ ಸರ್ಕಾರದ ಪ್ರತಿಕ್ರಿಯೆ ಪಡೆದ ಬಳಿಕ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


