ಐಇಡಿ ವಿಫಲಗೊಳಿಸಿದ ಭದ್ರತಾಪಡೆ; ಜಮ್ಮು-ಕಾಶ್ಮೀರದಲ್ಲಿ ತಪ್ಪಿದ ಭಾರಿ ಅನಾಹುತ, ಕಾಶ್ಮೀರದಲ್ಲಿ ವಿವಿಧೆಡೆ ಎನ್ಐಎ ದಾಳಿ
ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಐಇಡಿ ಸ್ಫೋಟವನ್ನು ವಿಫಲಗೊಳಿಸಿದ್ದು ಭಾರಿ ಅನಾಹುತ ತಪ್ಪಿದೆ.

ಶ್ರೀನಗರ: ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಐಇಡಿ ಸ್ಫೋಟವನ್ನು ವಿಫಲಗೊಳಿಸಿದ್ದು ಭಾರಿ ಅನಾಹುತ ತಪ್ಪಿದೆ.
ಬದ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶ ರಕ್ಷಣಾ ವಲಯ, ಶ್ರೀನಗರ ವಿಮಾನ ನಿಲ್ದಾಣ, ತಾಂತ್ರಿಕ ಏರ್ ಪೋರ್ಟ್, ಜಮ್ಮು-ಕಾಶ್ಮೀರ ಲೈಟ್ ಇನ್ಫಾಂಟ್ರಿ ಸೇನೆಯ ಕೇಂದ್ರ ಕಚೇರಿ, ಸಾರ್ವಜನಿಕರಿಗೆ ಸಂಬಂಧಿಸಿದ ಸೂಕ್ಷ್ಮ ಪ್ರದೇಶವಾಗಿದೆ.
ಐಇಡಿ ಪತ್ತೆಯಾದ ಗೊಗೊ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ.
ಸಂಭಾವ್ಯ ದಾಳಿಯ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧಕಾರ್ಯಾಚರಣೆಯನ್ನು ಆರಂಭಿಸಿದ ವೇಳೆ ಈ ಐಇಡಿ ಪತ್ತೆಯಾಗಿದೆ. ತಕ್ಷಣವೇ ಬಾಂಬ್ ನಿಗ್ರಹ ದಳವನ್ನು ಕರೆಸಿ ಐಇಡಿಯನ್ನು ನಿಷ್ಕ್ರಿಯಗೊಳಿಸಲಾಗಿದೆ.
ಕಾಶ್ಮೀರದ ಕಣಿವೆಯಲ್ಲಿ ವಿವಿಧೆಡೆ ಎನ್ಐಎ ದಾಳಿ
ರಾಷ್ಟ್ರೀಯ ತನಿಖಾ ದಳ ಸೆ.21 ರಂದು ಬೆಳಿಗ್ಗೆ ಕಾಶ್ಮೀರ ಕಣಿವೆಯ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದೆ. ಎನ್ಐಎ ಪೊಲೀಸರು ಲಸ್ಜನ್ ನ ನಿವಾಸಿ ಮೊಹಮ್ಮದ್ ಶಫಿ ವಾನಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ವಾನಿ ನಿವಾಸದಲ್ಲಿ ಶೋಧಕಾರ್ಯಾಚರಣೆ ನಡೆದಿದ್ದು, ಆ ವ್ಯಕ್ತಿ ಹಾಗೂ ಆತನ ಪುತ್ರನ ಮೊಬೈಲ್ ಗಳನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಳಿಕ ವಾನಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಚೌಕ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಇನ್ನು ಕುಲ್ಗಾಮ್ ಜಿಲ್ಲೆಯಲ್ಲಿ ವಸೀಮ್ ಅಹ್ಮದ್ ದರ್ ನಿವಾಸದ ಮೇಲೆ ಎನ್ಐಎ ದಾಳಿ ನಡೆದಿದೆ. ಅನನಂತ್ ನಾಗ್ ನಲ್ಲಿ ಬಶೀರ್ ಅಹ್ಮದ್ ನಿವಾಸದ ಮೇಲೆ, ಬಾರಾಮುಲ್ಲಾ ಜಿಲ್ಲೆಯಲ್ಲಿ ಘುಲಾಮ್ ಮೊಹ್ಯುದ್ ದಿನ್ ವಾನಿ- ರೇಷ್ಮೆ ಇಲಾಖೆಯ ನೌಕರನ ನಿವಾಸದ ಮೇಲೆಯೂ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


