ಕಾಶ್ಮೀರದ ಉಧಂಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್ ಸಾವು
ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಪತನವಾಗಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ಪೈಲಟ್‌ಗಳಾದ ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ ಅವರು ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಸೇನಾ ವಿಮಾನಯಾನ ದಳಕ್ಕೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಕಮಾಂಡರ್, ಉತ್ತರ ಕಮಾಂಡ್, ಲೆಫ್ಟಿನೆಂಟ್ ಜನರಲ್ ವೈ ಕೆ ಜೋಶಿ ಹುತಾತ್ಮ ಪೈಲಟ್ ಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


