ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ
ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ.

ಶ್ರೀನಗರ: ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ.
ಉಗ್ರರು ಸಂಗ್ರಹಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಒಸಿ ಬಳಿ ಹತ್ಲಾಂಗದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸುತ್ತಿದ್ದೆವು ಒಳನುಸುಳುವವರನ್ನು ತಡೆದು ಈ ಪೈಕಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
5 ಅಸಾಲ್ಟ್ ರೈಫಲ್ ಗಳು, 7 ಪಿಸ್ತೂಲ್ ಗಳು, ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಸೇನಾ ಚಿನಾರ್ ಕಾರ್ಪ್ಸ್ ನಲ್ಲಿ ಮಾತನಾಡಿರುವ ಸೇನಾ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ ಲಾಂಚ್ ಪ್ಯಾಡ್ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಟುವಟಿಕೆಗಳು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
"ವರ್ಷದ ಪ್ರಾರಂಭದಿಂದಲೂ ಒಳನುಸುಳುವಿಕೆ ವರದಿಯಾಗಿರಲಿಲ್ಲ. ಆದರೆ ಪಾಕಿಸ್ತಾನದ ಸೇನಾ ಕಮಾಂಡರ್ ಗಳ ಗಮನಕ್ಕೆ ಬಾರದೇ ಲಾಂಚ್ ಪ್ಯಾಡ್ ಗಳಲ್ಲಿ ಚಟುವಟಿಕೆ ನಡೆಯುವುದಕ್ಕೆ ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


