ದೇಶ

ಶಾಕಿಂಗ್ ನ್ಯೂಸ್: ಮಹಾರಾಷ್ಟ್ರದ ಥಾಣೆ ಬಳಿ ಅಪ್ರಾಪ್ತೆ ಮೇಲೆ 29 ಕಾಮುಕರಿಂದ ಗ್ಯಾಂಗ್ ರೇಪ್; 21 ಆರೋಪಿಗಳ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.

ಶಾಕಿಂಗ್ ನ್ಯೂಸ್: ಮಹಾರಾಷ್ಟ್ರದ ಥಾಣೆ ಬಳಿ ಅಪ್ರಾಪ್ತೆ ಮೇಲೆ 29 ಕಾಮುಕರಿಂದ ಗ್ಯಾಂಗ್ ರೇಪ್; 21 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಥಾಣೆ:  ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 29 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.  ಪೊಲೀಸರ ಪ್ರಕಾರ, ಆರೋಪಿಗಳು ಅಪ್ರಾಪ್ತೆಯ ಸ್ನೇಹಿತರಾಗಿದ್ದಾರೆ.

ಈವರೆಗೂ 21 ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಇಬ್ಬರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗಿದೆ. 29 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 (ಎನ್ ) 376 (3), 376 (ಡಿ) ಎ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಕಾಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದುಷ್ಕರ್ಮಿಗಳಿಗೆ ತೀವ್ರ ಶಿಕ್ಷೆಯಾಗಬೇಕೆಂದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಒಕ್ಕಾಯಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.