ದೇಶ

8 ತಿಂಗಳ ಅವಧಿಯಲ್ಲಿ ಹಲವು ಬಾರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: 28 ಆರೋಪಿಗಳ ಬಂಧನ

ಎಂಟು ತಿಂಗಳ ಅವಧಿಯಲ್ಲಿ ಹಲವು ಬಾರಿ 15 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದ ಮೇರೆಗೆ ನವೀ ಮುಂಬೈಯಿಂದ ಮತ್ತಿಬ್ಬರು ಆರೋಪಿಗಳನ್ನ ಥಾಣೆಯ ವಿಶೇಷ ಪೊಲೀಸ್ ತನಿಖಾ ತಂಡ ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

8 ತಿಂಗಳ ಅವಧಿಯಲ್ಲಿ ಹಲವು ಬಾರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: 28 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಥಾಣೆ: ಎಂಟು ತಿಂಗಳ ಅವಧಿಯಲ್ಲಿ ಹಲವು ಬಾರಿ 15 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದ ಮೇರೆಗೆ ನವೀ ಮುಂಬೈಯಿಂದ ಮತ್ತಿಬ್ಬರು ಆರೋಪಿಗಳನ್ನ ಥಾಣೆಯ ವಿಶೇಷ ಪೊಲೀಸ್ ತನಿಖಾ ತಂಡ ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ. 

ಇದರೊಂದಿಗೆ ಬಂಧಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ. ಈ ವರ್ಷದ ಜನವರಿ 29 ರಿಂದ ಸೆಪ್ಟೆಂಬರ್ 22 ರ ನಡುವೆ ಹಲವು ಕಡೆಗಳಲ್ಲಿ ಅನೇಕ ಬಾರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. 

ಸಂತ್ರಸ್ತೆ 33 ಆರೋಪಿಗಳ ಹೆಸರನ್ನು ಹೇಳಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ 33 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 ಎನ್ ಪದೇ ಪದೇ ಅತ್ಯಾಚಾರ) 376 ಡಿ( ಗ್ಯಾಂಗ್ ರೇಪ್ ) 376 (3) ಅಪ್ರಾಪ್ತೆ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಡೊಂಬಿವ್ಲಿಯ ಮಾನ್ಪದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.