ಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಆರ್'ಇಇಟಿ ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸೇರಿ 6 ಮಂದಿ ದುರ್ಮರಣ
ಆರ್'ಇಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಜೈಪುರ: ಆರ್'ಇಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ದುರಂತದಲ್ಲಿ ನಾಲ್ವರು ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬರಾನ್ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್ನಲ್ಲಿ ತೆರಳುತ್ತಿದ್ದ ವೇಳೆ, ಚಕ್ಸುವಿನ ರಾಷ್ಟ್ರೀಯ ಹೆದ್ದಾರಿ 12 ರ ನಿಮೋಡಿಯಾ ಬಳಿ ದುರಂತ ಸಂಭವಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಕ್ಸು ಪೊಲೀಸರು, ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


