ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ
ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ.

ಪಣಜಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್'ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ.
ಗೋವಾದಲ್ಲಿ ಬಿಜೆಪಿಯನ್ನು ಸೋಲಿಸಿ ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದು, ಇದಕ್ಕಾಗಿ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ‘ ಎಂದೂ ಅವರು ತಿಳಿಸಿದ್ದಾರೆ.
ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


