ಔಷದ ಪಡೆದು ಮಲಗಿದ್ದ ಮಹಿಳಾ ಅಧಿಕಾರಿ ಮೇಲೆ ರೇಪ್: ಐಎಎಫ್ ಲೆಫ್ಟಿನೆಂಟ್ ಬಂಧನ
ಭಾರತೀಯ ವಾಯುಪಡೆಯ ಮಹಿಳಾ ಅಧಿಕಾರಿ ಮೇಲಿನ ಅತ್ಯಾಚಾರ ಮಾಡಿದ ಆರೋಪದ ಮೇಲೆ ಐಎಎಫ್ ನ ಲೆಫ್ಟಿನೆಂಟ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಯಮತ್ತೂರ್: ಭಾರತೀಯ ವಾಯುಪಡೆ ಮಹಿಳಾ ಅಧಿಕಾರಿ ಮೇಲಿನ ಅತ್ಯಾಚಾರ ಮಾಡಿದ ಆರೋಪದ ಮೇಲೆ ಐಎಎಫ್ ನ ಲೆಫ್ಟಿನೆಂಟ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರ್ ಏರ್ ಪೋರ್ಸ್ ಆಡಳಿತಾತ್ಮಕ ಕಾಲೇಜಿನಲ್ಲಿ ಎರಡು ವಾರಗಳ ಹಿಂದೆ ಪ್ರಕರಣ ನಡೆದಿತ್ತು. ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಸಂತ್ರಸ್ತೆ ಕೊಯಮತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೊಯಮತ್ತೂರ್ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ದೂರಿನಲ್ಲಿ ಸೆಪ್ಟೆಂಬರ್ 10ರಂದು ಕ್ರೀಡೆಯೊಂದರಲ್ಲಿ ಭಾಗವಹಿಸಿದ್ದಾಗ ಬಿದ್ದು ಗಾಯವಾಗಿತ್ತು. ಔಷದ ತೆಗೆದುಕೊಂಡು ಮಲಗಿದ್ದೆ. ಆದರೆ ಮಧ್ಯರಾತ್ರಿ ನನಗೆ ಎಚ್ಚರವಾದಾಗ ನನ್ನ ಮೇಲೆ ಅತ್ಯಾಚಾರ ಆಗಿದ್ದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಪ್ರಕರಣದ ಆರೋಪಿಯಾಗಿರುವ ಅಮರಿಂದರ್ ಅವರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


