ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ನಾಲ್ವರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅನುಮಾನಾಸ್ಪದ ಚಲನವಲನ ಗಮನಿಸಿದ ನಂತರ ಉತ್ತರ ಕಾಶ್ಮೀರದ ಉರಿ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. "ಉರಿಯಲ್ಲಿನ ಎಲ್ಒಸಿಯಾದ್ಯಂತ ನುಸುಳುಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನುಸುಳುಕೋರರು ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಗುಂಡಿನ ಕಾಳಗಕ್ಕೆ ಕಾರಣವಾಯಿತು ಎಂದು ಅವರು ಹೇಳಿದರು.
ಕಳೆದ ಎರಡು ದಿನಗಳಿಂದ ಉಭಯ ದೇಶಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಒಬ್ಬ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


