ದೇಶ

ರಾಜ್ಯಸಭೆಗೆ ಸರ್ಬಾನಂದ ಸೋನೊವಾಲ್ ಅವಿರೋಧ ಆಯ್ಕೆ

ಕೇಂದ್ರ ಸಂಪುಟ ಸಚಿವ ಸರ್ಬಾನಂದ ಸೋನೊವಾಲ್ ಅವರು ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಸಭೆಗೆ ಸರ್ಬಾನಂದ ಸೋನೊವಾಲ್ ಅವಿರೋಧ ಆಯ್ಕೆ
ಸರ್ಬಾನಂದ ಸೋನೊವಾಲ್
Published On :

ಗುವಾಹಟಿ: ಕೇಂದ್ರ ಸಂಪುಟ ಸಚಿವ ಸರ್ಬಾನಂದ ಸೋನೊವಾಲ್ ಅವರು ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಇಂದು ಸರ್ಬಾನಂದ ಸೋನೊವಾಲ್ ಅವರ ವಿರುದ್ಧ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿಲ್ಲ.  ಚುನಾವಣೆಗೆ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋನೊವಾಲ್ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.

ಇದರೊಂದಿಗೆ, ಅಸ್ಸಾಂನಿಂದ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಬಲ ಮೂರಕ್ಕೆ ಏರಿಕೆಯಾಗಿದೆ. ಆದರೆ ಅದರ ಮಿತ್ರ ಪಕ್ಷವಾದ ಅಸೋಮ್ ಗಣ ಪರಿಷತ್(ಎಜಿಪಿ) ರಾಜ್ಯಸಭೆಯಲ್ಲಿ ಒಬ್ಬ ಸದಸ್ಯನನ್ನು ಹೊಂದಿದೆ.

ಈ ಆಯ್ಕೆಗಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಶರ್ಮಾ, ವಿಧಾನಸಭೆಯ ಎಲ್ಲಾ ಸದಸ್ಯರು ಮತ್ತು ರಾಜ್ಯದ ಜನರಿಗೆ ಕೇಂದ್ರ ಸಚಿವ ಸೋನೊವಾಲ್ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.