ಉತ್ತರಪ್ರದೇಶ: ಸೈಬರ್ ಕೆಫೆಯಲ್ಲಿ ವಿದ್ಯಾರ್ಥಿನಿಯರನ್ನು ಒತ್ತೆಯಾಳಾಗಿಟ್ಟುಕೊಂಡು ನಾಲ್ವರು ಕಾಮುಕರಿಂದ ಗ್ಯಾಂಗ್ ರೇಪ್!
ಸೈಬರ್ ಕೆಫೆಯಲ್ಲಿ ಇಬ್ಬರು ಹುಡುಗಿಯರನ್ನು ಒತ್ತೆಯಾಳಾಗಿ ಇಟ್ಟುಕೊಂಡು ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನೌಜ್ (ಉತ್ತರ ಪ್ರದೇಶ): ಸೈಬರ್ ಕೆಫೆಯಲ್ಲಿ ಇಬ್ಬರು ಹುಡುಗಿಯರನ್ನು ಒತ್ತೆಯಾಳಾಗಿ ಇಟ್ಟುಕೊಂಡು ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 13ರಂದು ಕೆಲವು ದಾಖಲೆಗಳನ್ನು ಜೆರಾಕ್ಸ್ ಮಾಡಿಸಿಕೊಳ್ಳಲು ಇಬ್ಬರು ವಿದ್ಯಾರ್ಥಿನಿಯರು ಕೆಫೆಗೆ ತೆರಳಿದ್ದು ಈ ವೇಳೆ ಅವರನ್ನು ನಾಲ್ವರು ಒತ್ತೆಯಾಳಾಗಿಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದು ಅಲ್ಲದೆ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ವಿಡಿಯೋ ಹರಿಬಿಡುವ ಬೆದರಿಕೆಯೊಡ್ಡಿ ಸಂತ್ರಸ್ತೆಯರಿಂದ 10 ಸಾವಿರ ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯೊಬ್ಬರ ದೂರಿನ ಆಧಾರದ ಮೇಲೆ ಮಹಿಳೆ ಸೇರಿದಂತೆ ಆರು ಜನರ ವಿರುದ್ಧ ಸದರ್ ಕೊತ್ವಾಲಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ವರ್ಮಾ ತಿಳಿಸಿದ್ದಾರೆ.
17 ವರ್ಷದ ವಿದ್ಯಾರ್ಥಿನಿ ತನ್ನ ದೂರಿನಲ್ಲಿ ತನ್ನ ಸ್ನೇಹಿತೆಯೊಂದಿಗೆ ಸೆಪ್ಟೆಂಬರ್ 13ರಂದು ಮಧ್ಯಾಹ್ನ ಸೈಬರ್ ಕೆಫೆಗೆ ಹೋಗಿದ್ದಾಗ ಅಲ್ಲಿ ಈಗಾಗಲೇ ಇದ್ದ ನಾಲ್ವರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದಾಳೆ.
ಅಲ್ಲದೆ ಆರೋಪಿಯೊಬ್ಬ ಈ ಕೃತ್ಯದ ವೀಡಿಯೋವನ್ನು ಸಂತ್ರಸ್ತೆಯ ಸೋದರ ಮಾವನಿಗೆ ನೀಡಿದ್ದು, ವಿಡಿಯೋ ಹರಿಬಿಡುವುದಾಗಿ ಬೆದರಿಸಿ 10,000 ರೂ. ಸುಲಿಗೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಗೆ ನೀಡಲು ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತೆ ತಮ್ಮ ಮನೆಯಿಂದ ಹಣವನ್ನು ಕದ್ದಿದ್ದಾಗಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಣ ಕಾಣೆಯಾಗಿರುವ ಕುರಿತು ಮನೆಯ ಸದಸ್ಯನೋರ್ವ ಎಚ್ಚರಿಸಿದ ಬಳಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಾಧ್ಯವಿರುವ ಎಲ್ಲ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


