ಶ್ರೀನಗರದಲ್ಲಿ ಜಮ್ಮು-ಕಾಶ್ಮೀರ ಪೊಲೀಸರಿಂದ ಎಲ್ ಇಟಿ ಉಗ್ರರ ಅಡಗುತಾಣ ಪತ್ತೆ
ಶ್ರೀನಗರ ಜಿಲ್ಲೆಯ ರಾಜೌರಿಕಾದಲ್ ಪ್ರದೇಶದಲ್ಲಿ ಭಯೋತ್ಪಾದಕ ಅಡಗು ತಾಣವೊಂದನ್ನು ಪತ್ತೆ ಹಚ್ಚಲಾಗಿದ್ದು, ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಶ್ರೀನಗರ: ಶ್ರೀನಗರ ಜಿಲ್ಲೆಯ ರಾಜೌರಿಕಾದಲ್ ಪ್ರದೇಶದಲ್ಲಿ ಭಯೋತ್ಪಾದಕ ಅಡಗು ತಾಣವೊಂದನ್ನು ಪತ್ತೆ ಹಚ್ಚಲಾಗಿದ್ದು, ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಪುಲ್ವಾಮ ಪೊಲೀಸ್ ಮತ್ತು ಸೇನೆಯ 50 ಆರ್ ಆರ್ ನೊಂದಿಗೆ ಶ್ರೀನಗರ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಯಲ್ಲಿ ಎಲ್ ಇಟಿ ಕಮಾಂಡರ್ ರಿಯಾಜ್ ಸಥರ್‌ಗುಂಡ್ ಇರುವುದನ್ನು ಖಚಿತಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಜೌರಿಕಾದಲ್ ಪ್ರದೇಶದಲ್ಲಿ ಅಡಗುಣ ತಾಣ ನಿರ್ಮಿಸುವಂತೆ ಬಂಧಿತ ಉಗ್ರರ ಸಹಚರರನ್ನು ರಿಯಾಜ್ ಕೇಳಿಕೊಂಡಿದ್ದ ಎನ್ನಲಾಗಿದೆ. ಈ ಮಾಹಿತಿ ಆಧಾರದ ಮೇಲೆ ಸಿಆರ್ ಪಿಎಫ್ ಸಿಬ್ಬಂದಿಯೊಂದಿಗೆ ಇಂದು ಮುಂಜಾನೆ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಅಡಗುಣ ತಾಣ ಪತ್ತೆ ಹಚ್ಚಲಾಗಿದೆ.
ಆದಾಗ್ಯೂ, ಅಡಗು ತಾಣದಲ್ಲಿ ಏನೂ ಸಿಕ್ಕಿಲ್ಲ. ಈ ಮನೆಯ ಮಾಲೀಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


