ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್, ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು,...

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಕ್ಯಾಪ್ಟನ್ ಕೇಸರಿ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ.
ಅಮರೀಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ಇಂದು ಅಮಿತ್ ಶಾ ಭೇಟಿ ಮಾಡಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಭೇಟಿ ಕೇವಲ "ಸೌಜನ್ಯದ ಭೇಟಿ" ಎಂದು ಪಂಜಾಬ್ ಮಾಜಿ ತಂಡ ಹೇಳಿಕೊಂಡಿದೆ. ಆದರೆ ಸಿಂಗ್-ಶಾ-ನಡ್ಡಾ ಭೇಟಿಯು ಮುಂದಿನ ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಕೆಲವು ವರದಿಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


