ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗವಳಿಗೆ ಇಡಿ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್ ಜಾರಿಮಾಡಿದೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್ ಜಾರಿಮಾಡಿದೆ
ಅಕ್ಟೋಬರ್ 4ರಂದು ದಕ್ಷಿಣ ಮುಂಬೈನ ಇ.ಡಿ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಇ.ಡಿ ಮಂಗಳವಾರ ಭಾವನಾ ಗವಳಿ ಅವರ ಆಪ್ತ ಸಯೀದ್ ಖಾನ್ ಅವರನ್ನು ಬಂಧಿಸಿದೆ.
ಸುಮಾರು 18 ಕೋಟಿ ರು ಹಣವನ್ನು ತಮ್ಮ ಆಪ್ತ ಸಯೀದ್ ಖಾನ್ ಮೂಲಕ ವಂಚಿಸಲು ಭಾವನಾ ಗವಳಿ ಪಿತೂರಿ ನಡೆಸಿದ್ದರು ಎಂದು ಇಡಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


