ಭಾರತದ ಸಂಸ್ಥೆಗೆ ನೊಬೆಲ್ ಸಮನಾದ ರೈಟ್ ಲೈವ್ಲಿಹುಡ್ ಪ್ರಶಸ್ತಿ: ಮಕ್ಕಳ ಹಕ್ಕುಗಳು ಮತ್ತು ಪರಿಸರ ಸಂರಕ್ಷಣೆ
LIFE ಸಂಸ್ಥೆ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದೆ. 2005ರಲ್ಲಿ ಇಬ್ಬರು ವಕೀಲರಾದ ರಿತ್ವಿಕ್ ದತ್ತಾ ಮತ್ತು ರಾಹುಲ್ ಚೌಧರಿ LIFE ಸಂಸ್ಥೆಯನ್ನು ಪ್ರಾರಂಭಿಸಿದ್ದರು.

ನವದೆಹಲಿ: ನೊಬೆಲ್ ಗೆ ಸಮನಾದ ಪ್ರಶಸ್ತಿ ಎಂದೇ ಹೆಸರಾದ 2021 ಸಾಲಿನ ರೈಟ್ ಲೈವ್ಲಿಹುಡ್ ಪ್ರಶಸ್ತಿಗೆ ಈ ಬಾರಿ ನಾಲ್ಕು ಮಂದಿ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು 'ಅಲ್ಟರ್ನೇಟಿವ್ ನೊಬೆಲ್' ಎಂದೇ ಕರೆಯಲಾಗುತ್ತದೆ.
ಇದನ್ನೂ ಓದಿ: “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಗೆ ಸ್ಪೇನ್ ಪ್ರಶಸ್ತಿ
ಈ ಬಾರಿ ಪ್ರಶಸ್ತಿಗೆ ಭಾಜನರಾದ ನಾಲ್ಕು ಮಂದಿಯಲ್ಲಿ ಭಾರತದ LIFE(Legal Initiative for Forest and Environment) ಎನ್ ಜಿ ಒ ಕೂಡಾ ಸೇರಿದೆ. ಸಮಾಜದ ಕೆಳವರ್ಗದ ಜನರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರನ್ನಾಗಿಸುವ ಕೆಲಸದಲ್ಲಿ ಈ ಸಂಸ್ಥೆ ನಿರತವಾಗಿದೆ.
ಅಲ್ಲದೆ LIFE ಸಂಸ್ಥೆ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದೆ. 2005ರಲ್ಲಿ ಇಬ್ಬರು ವಕೀಲರಾದ ರಿತ್ವಿಕ್ ದತ್ತಾ ಮತ್ತು ರಾಹುಲ್ ಚೌಧರಿ LIFE ಸಂಸ್ಥೆಯನ್ನು ಪ್ರಾರಂಭಿಸಿದ್ದರು.
ಕೆನಡಾದ ಸಾಮಾಜಿಕ ಕಾರ್ಯಕರ್ತೆ ಫ್ರೀಡಾ ಹ್ಯೂಸನ್, ಮಹಿಳೆಯರ ಮೇಲಿನ ದೌರ್ಜನ್ಯ ವಿರುದ್ಧ ಹೋರಾಟ ನಡೆಸುತ್ತಿರುವ ಕೆಮರೂನಿನ ವಾಂಡೋ ಮತ್ತು ರಷ್ಯಾದ ಪರಿಸರ ಹೋರಾಟಗಾರ ವ್ಲಾದಿಮಿರ್ ಸ್ಲಿವ್ಯಾಕ್ ಪ್ರಶಸ್ತಿಗೆ ಭಾಜನರಾದ ಇತರೆ ಮೂವರು.
Related Article
ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಮೈಸೂರು: ರಾಷ್ಟ್ರ ಪ್ರಶಸ್ತಿ ಪಡೆಯಲು ವಿದ್ಯಾರ್ಥಿನಿಗೆ ಸಹಾಯ ಮಾಡಿದ ಕಲಾ ಶಿಕ್ಷಕಿ!
ಗಂಟೆಗೆ 1000 ಕಿ.ಮೀ ಚಲಿಸುವ ರೈಲು ಮಾದರಿಗೆ ಯುರೋಪಿಯನ್ ಪ್ರಶಸ್ತಿ: ಭಾರತೀಯ ವಿದ್ಯಾರ್ಥಿಗಳ ಸಾಧನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


