ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ
ಟ್ರಕ್ ಅಪಘಾತ
Published On :

ಅಮರಾವತಿ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ ಟ್ರಕ್ ನಲ್ಲಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಲ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ  ಕೊಡಿಸಲಾಗುತ್ತಿದೆ. 

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಟ್ರಕ್ ನಲ್ಲಿ ಸುಮಾರು 16 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ದಿನಗೂಲಿ ನೌಕರರಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಾವಿಗೀಡಾದವರ ಮೃತದೇಹಗಳನ್ನು ಕುಟುಂಬಸ್ಥರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ  ಕೋರೆಗಾಂವ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಬುಲ್ದಾನಾ ಜಿಲ್ಲಾಧಇಕಾರಿ ಎಸ್ ರಾಮಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.