ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ
ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ.

ನವದೆಹಲಿ: ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ.
ಇದನ್ನೂ ಓದಿ: ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ 10 ತಿಂಗಳ ನಂತರ ಮೊದಲ ಡೋಸ್ ಪಡೆದ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ!
ಇದುವರೆಗೂ ಭಾರತದಲ್ಲಿ 4 ಒಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ದ. ಆಫ್ರಿಕಾದಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾದ ದಿನದಿಂದ ಕೊರೊನಾ ಲಸಿಕೆ ಹಂಚಿಕೆ ವೇಗ ಪಡೆದುಕೊಂಡಿದೆ.
ಭಾರತ ಎರಡು ತಿಂಗಳ ಹಿಂದೆ ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಲಸಿಕೆ ನೀಡಿದ ಹೆಸರಿಗೆ ಪಾತ್ರವಾಗಿತ್ತು. ಇದೀಗ ಮತ್ತೆ 1 ಕೋಟಿ ಡೋಸ್ ಲಸಿಕೆ ಪೂರೈಸಿರುವುದನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Related Article
ಮೊದಲು 2 ಡೋಸ್ ಲಸಿಕೆ ಗುರಿಗೆ ಆದ್ಯತೆ ನೀಡಿ: ಬೂಸ್ಟರ್ ಡೋಸ್ ಗೆ ಒತ್ತಾಯದ ನಡುವೆ ತಜ್ಞರ ಸಲಹೆ
ಮನೆ-ಮನೆ ತೆರಳಿ ಕೋವಿಡ್ ಲಸಿಕೆ: ಆಶಾ ಕಾರ್ಯಕರ್ತರೊಂದಿಗೆ ಕೈಜೋಡಿಸಿದ ಜಲಮಂಡಳಿ ಇಲಾಖೆ ನೌಕರರು!
ತಜ್ಞರ ಸಲಹೆ ಮೇರೆಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ಬಗ್ಗೆ ನಿರ್ಧಾರ: ಕೇಂದ್ರ ಆರೋಗ್ಯ ಸಚಿವ
ದೇಶದಲ್ಲಿ ಶೇ.49 ರಷ್ಟು ಜನರಿಗೆ ಮಾತ್ರ ಎರಡನೇ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಮಾಹಿತಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


