'ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ರೈತರಂತೆ ತ್ಯಾಗ ಮಾಡಬೇಕು': ಫಾರೂಕ್ ಅಬ್ದುಲ್ಲಾ
ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ.

ಶ್ರೀನಗರ: ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ.
ಹಜರತ್‌ಬಾಲ್‌ನಲ್ಲಿರುವ ತಮ್ಮ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಕುಲಪತಿ ಶೇಖ್ ಮುಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಗ್ರಾಮ ಮತ್ತು ಪ್ರದೇಶದಲ್ಲಿ ತಳಮಟ್ಟದ ಜನರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.
700 ರೈತರ ಬಲಿದಾನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಕೇಂದ್ರವು ನಮ್ಮಿಂದ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ನಾವು ಇದೇ ರೀತಿಯ ತ್ಯಾಗ ಮಾಡಬೇಕಾಗಬಹುದು ಎಂದರು.
ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಅಬ್ದುಲ್ಲಾ ಅವರು, ಅಚಲರಾಗಿ ನಿಂತು ತಮ್ಮ ಹೋರಾಟವನ್ನು ಕೈಬಿಡದೆ ಯಶಸ್ವಿಯಾದ ರೈತರಂತೆ ನಾವು ಪ್ರಾಣವನ್ನು ಪಣಕ್ಕಿಟ್ಟು 370 ಮತ್ತು 35ಎ ವಿಧಿ ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


