ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ: ದೆಹಲಿ ಮತ್ತು ರಾಜಸ್ಥಾನದಲ್ಲಿ ಮೊದಲ ಪ್ರಕರಣ ದಾಖಲು
ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ.

ನವದೆಹಲಿ: ಭಾನುವಾರ ಒಂದೇ ದಿನ 17 ಒಮಿಕ್ರಾನ್ ಪತ್ತೆಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ ೨೧ಕ್ಕೆ ಏರಿಕೆಯಾಗಿದೆ. ಪತ್ತೆಯಾದ 17 ಒಮಿಕ್ರಾನ್ ಪ್ರಕರಣಗಳಲ್ಲಿ 9 ರಾಜಸ್ಥಾನ, 7 ಮಹಾರಾಷ್ಟ್ರ ಮತ್ತು ದೆಹಲಿಗೆ ಬಂದಿಳಿದ ತಾಂಜಾನಿಯಾ ಪ್ರಜೆಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ: ಓಮಿಕ್ರಾನ್ ಸೋಂಕಿತ ಕಳೆದ ಎಪ್ರಿಲ್ ನಿಂದ ಹಡಗಿನಲ್ಲಿದ್ದ: ಕೊರೊನಾ ಲಸಿಕೆ ಪಡೆಯಲಾಗಿರಲಿಲ್ಲ
ರಾಜಸ್ಥಾನದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಕುಟುಂಬ ಸದಸ್ಯರು ಇತ್ತೀಚಿಗೆ ದ.ಆಫ್ರಿಕಾದಿಂದ ಆಗಮಿಸಿದ್ದರು. ಇನ್ನು ಮಹಾರಾಷ್ಟ್ರದಲ್ಲಿ ಪತ್ತೆಯಾದ ಸೋಂಕಿತರು ಇತ್ತೀಚಿಗೆ ನೈಜೀರಿಯಾದಿಂದ ಭಾರತಕ್ಕೆ ಆಗಮಿಸಿದ್ದರು.
ಭಾರತದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಇದುವರೆಗೂ ಕರ್ನಾಟಕದಲ್ಲಿ 2 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


