ಸಿಡಿಎಸ್ ಬಿಪಿನ್ ರಾವತ್ ಪಂಚ ಭೂತಗಳಲ್ಲಿ ಲೀನ: ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ
ತಮಿಳುನಾಡಿನ ಕುನೂರು ಬಳಿ ಬುಧವಾರ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಪಂಚಭೂತಗಳಲ್ಲಿ ಲೀನರಾದರು. ದೆಹಲಿಯ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ನವದೆಹಲಿ: ತಮಿಳುನಾಡಿನ ಕುನೂರು ಬಳಿ ಬುಧವಾರ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಪಂಚಭೂತಗಳಲ್ಲಿ ಲೀನರಾದರು. ದೆಹಲಿಯ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಸೇನಾ ಸಿಬ್ಬಂದಿ 17 ಬಾರಿ ಕುಶಾಲ ತೋಪು ಸಿಡಿಸಿದ ನಂತರ ರಾವತ್ ಅವರ ಪುತ್ರಿಯರಾದ ಕೃತಿಕಾ ಹಾಗೂ ತಾರಿಣಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ತಮ್ಮ ತಂದೆ-ತಾಯಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾನೂನು ಸಚಿವ ಕಿರಣ್ ರಿಜಿಜು, ಫ್ರಾನ್ಸ್ ನ ಭಾರತದ ರಾಯಭಾರಿ ಇಮ್ಯಾನುಯೆಲ್ ಲೆನೈನ್ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಶ್ರೀಲಂಕಾ, ಭೂತಾನ್, ನೇಪಾಳ ಮತ್ತು ಬಾಂಗ್ಲಾದೇಶದ ಮಿಲಿಟರಿ ಕಮಾಂಡರ್ ಗಳು ಅಂತ್ಯಕ್ರಿಯೆಲ್ಲಿ ಪಾಲ್ಗೊಂಡಿದ್ದರು.
ಚಿತಾಗಾರದ ಹೊರಗಡೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಘೋಷಣೆ ಕೂಗುತ್ತಾ, ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಂತ್ಯ ಕ್ರಿಯೆ ವೇಳೆ ಸುಮಾರು 800 ಸೇನಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಬುಧವಾರ ಹೆಲಿಕಾಪ್ಟರ್ ಪತನದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


