ದೇಶ

ಕೇರಳ: ಎಸ್‌ಡಿಪಿಐ ಮುಖಂಡನ ಕೊಲೆ ನಡೆದು ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕನ ಹತ್ಯೆ

ಕೇರಳದಲ್ಲಿ ಮುಸ್ಲಿಂ ಸಂಘಟನೆಯಾದ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಕೆಲವೇ ಗಂಟಗಳ ಅಂತರದಲ್ಲಿ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ.

ಕೇರಳ: ಎಸ್‌ಡಿಪಿಐ ಮುಖಂಡನ ಕೊಲೆ ನಡೆದು ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕನ ಹತ್ಯೆ
ರೆಂಜಿತ್ ಶ್ರೀನಿವಾಸನ್ - ಎ ಎಸ್ ಶಾನ್
Published On :

ಅಲಪ್ಪುಳ: ಕೇರಳದಲ್ಲಿ ಮುಸ್ಲಿಂ ಸಂಘಟನೆಯಾದ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಕೆಲವೇ ಗಂಟಗಳ ಅಂತರದಲ್ಲಿ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ.

ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಮುಸ್ಲಿಂ ಪಕ್ಷದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಎ ಎಸ್ ಶಾನ್(38) ಅವರನ್ನು ಕೊಲೆ ಮಾಡಿದ ನಂತರ, ಇಂದು ಬೆಳಗಿನ ಜಾವ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರೆಂಜಿತ್ ಶ್ರೀನಿವಾಸನ್(40) ಅವರ ಮನೆಗೆ ನುಗ್ಗಿದ ಜನರ ಗುಂಪೊಂದು ಅವರನ್ನು ಹತ್ಯೆ ಮಾಡಿದೆ. ಎಸ್‌ಡಿಪಿಐ ಪಿಎಫ್‌ಐನ ರಾಜಕೀಯ ಸಂಘಟನೆಯಾಗಿದೆ.

ಎರಡು ಕೊಲೆಯ ನಂತರ ಪರಿಸ್ಥಿತಿ ಉದ್ವಿಗ್ನ ಗೊಂಡಿರುವುದರಿಂದ, ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಅಲಪ್ಪುಳ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿನ್ನೆ ರಾತ್ರಿ ಅಲಪ್ಪುಳದ ಮನ್ನಂಚೇರಿ ಬಳಿಯ ಪೊನ್ನಾಡ್ ಎಂಬಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಶಾನ್ ಅವರಿಗೆ ಬೈಕ್ ಗೆ ಕಾರು ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು, ಎಸ್ ಡಿಪಿಐ ನಾಯಕ ಕೆಳಗೆ ಬೀಳುತ್ತಿದ್ದಂತೆಯೇ ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಇದು ಪ್ರತೀಕಾರದ ದಾಳಿಯಂತೆ ತೋರುತ್ತಿದೆ. ಅಲಪ್ಪುಳ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ರೆಂಜಿತ್ ಅವರ ಮನೆಗೆ ನುಗ್ಗಿದ ಜನರ ಗುಂಪು ಅವರನ್ನೂ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ರೆಂಜಿತ್ 2016ರ ಚುನಾವಣೆಯಲ್ಲಿ ಅಲಪ್ಪುಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.