ಕೋವಿಡ್-19: ದೇಶದಲ್ಲಿ ಇಂದು 6,563 ಹೊಸ ಪ್ರಕರಣ ಪತ್ತೆ, 132 ಸಾವು ವರದಿ
ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,563 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ನಿನ್ನೆ ದಾಖಲಾಗಿದ್ದ ಹೊಸ ಪ್ರಕರಣಗಳಿಗಿಂತ ಶೇ7ರಷ್ಟು ಕಡಿಮೆ ಎನ್ನಲಾಗಿದೆ. ನಿನ್ನೆ ದೇಶಾದ್ಯಂತ 7,081 ಹೊಸ ಸೋಂಕು ಪ್ರಕರಣಗಳು ದಾಖಲಾಗಿತ್ತು.
ಅಂತೆಯೇ ಇದೇ ಅವಧಿಯಲ್ಲಿ 132 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 4,77,554ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 8,077 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,41,87,017ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ,98.39ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 82, 267ರಷ್ಟಿದೆ ಎಂದು ತಿಳಿದುಬಂದಿದೆ.
ಅಂತೆಯೇ ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ ಮುಂದುವರೆದಿದ್ದು, ಈ ವರೆಗೂ 137.67 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


