ಹಿಂದೂಗಳು ಪ್ರತಿಯೊಬ್ಬರ ಡಿಎನ್ಎ ಕೂಡ ವಿಶಿಷ್ಟ ಮತ್ತು ವಿಭಿನ್ನ ಎಂದು ನಂಬುತ್ತಾರೆ: ರಾಹುಲ್ ಗಾಂಧಿ
ಹಿಂದುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಎಂದು ಭಾವಿಸುತ್ತಾರೆ. ಆದರೆ, ಹಿಂದೂಗಳಾದವರು ಮಾತ್ರ ಪ್ರತಿಯೊಬ್ಬ ವ್ಯಕ್ತಿಯೂ ವಿಶಿಷ್ಟವಾದ ಡಿಎನ್‌ಎ ಹೊಂದಿರುವುದಾಗಿ ನಂಬುತ್ತಾರೆ

ನವದೆಹಲಿ: ಹಿಂದುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಎಂದು ಭಾವಿಸುತ್ತಾರೆ. ಆದರೆ, ಹಿಂದೂಗಳಾದವರು ಮಾತ್ರ ಪ್ರತಿಯೊಬ್ಬ ವ್ಯಕ್ತಿಯೂ ವಿಶಿಷ್ಟವಾದ ಡಿಎನ್‌ಎ ಹೊಂದಿರುವುದಾಗಿ ನಂಬುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
40,000 ವರ್ಷಗಳಿಂದ ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿದ್ದರು. ಮೋಹನ್ ಭಾಗವತ್ ಅವರ ಹೇಳಿಕೆಗೆ ರಾಹುಲ್ ಪ್ರತಿಕ್ರಿಯಿಸಿದ್ದಾರೆ.
‘ಪ್ರತಿಯೊಬ್ಬ ವ್ಯಕ್ತಿಯ ಡಿಎನ್‌ಎ ಕೂಡ ವಿಭಿನ್ನ ಮತ್ತು ವಿಶಿಷ್ಟವಾಗಿದೆ ಎಂದು ಹಿಂದೂಗಳು ನಂಬುತ್ತಾರೆ,‘ ಎಂದು ಅವರು ಹೇಳಿದ್ದಾರೆ. ಹಿಂದು ಮತ್ತು ಹಿಂದುತ್ವವಾದಿಗಳ ನಡುವೆ ವ್ಯತ್ಯಾಸವಿರುವುದಾಗಿ ರಾಹುಲ್ ಗಾಂಧೀಜಿ ಇತ್ತೀಚೆಗೆ ಪ್ರತಿಪಾದಿಸಲಾರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


