ದೇಶ

ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ

ತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ
ಐಟಿ ದಾಳಿ ವೇಳೆ ಪತ್ತೆಯಾದ ನಗದು
Published On :

ಕಾನ್ಪುರ: ತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮುಂದಿನ ಕ್ರಮಕ್ಕಾಗಿ ಸುಗಂಧ ದ್ರವ್ಯ ಉದ್ಯಮಿಯನ್ನು ಕಾನ್ಪುರದಿಂದ ಅಹಮದಾಬಾದ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ತೆರಿಗೆ ವಂಚನೆ ಆರೋಪದ ಮೇಲೆ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಸರಕು ಮತ್ತು ಸೇವಾ ತೆರಿಗೆಯ ಜಂಟಿ ಆಯುಕ್ತ(ಕಾನ್ಪುರ) ಸುರೇಂದ್ರ ಕುಮಾರ್ ಅವರು ತಿಳಿಸಿದ್ದಾರೆ.

ಕಳೆದ ವಾರ ಜೈನ್ ಒಡೆತನದ ಕಂಪನಿ, ಕಚೇರಿ ಮತ್ತು ಮನೆ ಮೇಲೆ ಸರಣಿ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ 257 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಇನ್‌ವಾಯ್ಸ್‌ಗಳ ಮೂಲಕ ಮತ್ತು ಇ-ವೇ ಬಿಲ್‌ಗಳಿಲ್ಲದೆ ಸರಕು ಸಾಗಣೆದಾರರಿಂದ ಸರಕುಗಳ ರವಾನೆಗೆ ಹಣವನ್ನು ಲಿಂಕ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾಲ್ಕನೇ ದಿನವೂ ದಾಳಿ ಮುಂದುವರೆದಿದ್ದು, ದಾಳಿ ಮುಗಿಯುವ ಹೊತ್ತಿಗೆ ಇನ್ನಷ್ಟು ಹೆಚ್ಚಿನ ನಗದು ಪತ್ತೆಯಾಗುವ ಸಾಧ್ಯತೆ ಇದೆ. ಜಿಎಸ್​ಟಿಯ ಉತ್ತರ ಪ್ರದೇಶ, ಗುಜರಾತ್​ ಘಟಕಗಳ ಅಧಿಕಾರಿಗಳು ಸೇರಿ ಪಿಯುಷ್​ ಜೈನ್​ ಮನೆ ಮತ್ತು ಆತನಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. 40 ತಾಸುಗಳಿಂದಲೂ ಪಿಯುಷ್​ಗೆ ಸಂಬಂಧಪಟ್ಟ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಹಣ ಎಣಿಕೆ ಕಾರ್ಯ ನಡೆಯುತ್ತಲೇ ಇದೆ. ಮನೆಗಳಲ್ಲಿರುವ ಕೆಲವು ಕೋಣೆಗಳ ಬಾಗಿಲನ್ನು ತೆಗೆಯಲು ಬಾರದ ಕಾರಣ ಬೀಗ ತೆಗೆಯುವವರನ್ನೂ ಕರೆಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.