ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ದೇಶದಲ್ಲಿಂದು 39,796 ಹೊಸ ಕೇಸ್ ಪತ್ತೆ, 723 ಮಂದಿ ಸಾವು
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಇದೇ ಅವಧಿಯಲ್ಲಿ 723 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4,82,071ಕ್ಕೆ ಕುಸಿದಿದ್ದು, ಹಲವು ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 42,352 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,97,00,430ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 15,22,504 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 41,97,77,457 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 35,28,92,046 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


