ದೇಶ

ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ: ಕೇವಲ 5,000 ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ.

ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ: ಕೇವಲ 5,000 ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ
ದೇವಾಲಯ ಪ್ರವೇಶಿಸಿದ ಭಕ್ತರು
Published On :

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. 

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. 

ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.

ಜುಲೈ 17ರಿಂದ 21ರವರೆಗೆ ಮಾಸಿಕ ವಿಧಿವಿಧಾನಗಳಿಗಾಗಿ ದೇವಾಲಯ ಬಾಗಿಲು ತೆರೆಯಲಾಗಿದೆ. ಮಾಸಿಕ ಆಚರಣೆಗಳಿಗಾಗಿ ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-19 ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಲಾಕ್‌ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ 1,200 ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು. ಆದಾಗ್ಯೂ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿತ್ತು.

ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ.

ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ 48 ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್-19 ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ 21ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.