ಮಹಾರಾಷ್ಟ್ರ: ಸೆಕ್ಸ್ ದಂಧೆ ನಡೆಸುತ್ತಿದ್ದಕ್ಕಾಗಿ ಚಿತ್ರ ನಿರ್ಮಾಪಕ ಸೇರಿ ಮೂವರು ಬಂಧನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರಸ್ತೆಯಲ್ಲಿ ಮಾಂಸ ದಂಧೆ ನಡೆಸಿದ ಆರೋಪದ ಮೇಲೆ ಚಿತ್ರ ನಿರ್ಮಾಪಕ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರಸ್ತೆಯಲ್ಲಿ ಮಾಂಸ ದಂಧೆ ನಡೆಸಿದ ಆರೋಪದ ಮೇಲೆ ಚಿತ್ರ ನಿರ್ಮಾಪಕ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ರ ನಿರ್ಮಾಪಕ ಲೈಂಗಿಕ ದಂಧೆ ನಡೆಸುತ್ತಿದ್ದಾನೆ. ಅಲ್ಲದೆ ಮಹಿಳೆಯರಿಗೆ ತನ್ನ ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಹೇಳಿ ಮಾಂಸದಂಧೆಗೆ ಒತ್ತಾಯಿಸುತ್ತಿರುವುದಾಗಿ ಪೊಲೀಸರಿಗೆ ಸುಳಿವು ಸಿಕ್ಕಿತ್ತು ಎಂದು ಪೊಲೀಸ್ ಅಪರಾಧದ ಉಪ ಆಯುಕ್ತ ಡಾ.ಮಹೇಶ್ ಪಾಟೀಲ್ ಹೇಳಿದ್ದಾರೆ.
ಹಲವಾರು ವರ್ಷಗಳಿಂದ ಮೀರಾ ರಸ್ತೆಯ ವಸತಿ ಸಮುಚ್ಚಯದಿಂದ ಈ ದಂಧೆಯನ್ನು ನಡೆಸಲಾಗುತ್ತಿದೆ. ಮುಖ್ಯ ಆರೋಪಿ ಖಾನಯಲಾಲ್ ಬಾಲ್ಚಂದಾನಿಗೆ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿದ್ದ ವನಿತಾ ಇಂಗಲ್ ಎಂಬಾತನನ್ನು ಬಂಧಿಸಲಾಗಿದೆ.
ಪೊಲೀಸರು ಗ್ರಾಹಕರ ಸೋಗಿನಲ್ಲಿ ಅಪಾರ್ಟ್ ಮೆಂಟ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಮಹೇಶ್ ಪಾಟೀಲ್ ಹೇಳಿದರು.
ಬಂಧಿತ ಮೂವರ ವಿರುದ್ಧ ಮೀರಾ ರಸ್ತೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ಅನೈತಿಕ ವ್ಯವಹಾರ(ತಡೆ) ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


