ಜನರಿಂದ ಸಹಾನುಭೂತಿ ಪಡೆಯಲು ಮಮತಾ ಪ್ರಯತ್ನ: ಅಧೀರ್ ರಂಜನ್ ಚೌಧರಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ಕೊಲೆ ಯತ್ನ, ಪಿತೂರಿ, ಹಲ್ಲೆಯಂತಹ ಘಟನೆಗಳು ನಡೆದಿವೆ ಎಂದು ಹೇಳುವ ಮೂಲಕ ಜನರಿಂದ ಸಹಾನುಭೂತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ಕೊಲೆ ಯತ್ನ, ಪಿತೂರಿ, ಹಲ್ಲೆಯಂತಹ ಘಟನೆಗಳು ನಡೆದಿವೆ ಎಂದು ಹೇಳುವ ಮೂಲಕ ಜನರಿಂದ ಸಹಾನುಭೂತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.
ತನ್ನೊಂದಿಗೆ ಪೊಲೀಸರು ಇರಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳುವುದು ಹಾಸ್ಯಾಸ್ಪದವಾಗಿದೆ. ಇದು ನೆಪಗಳೊಂದಿಗೆ ಚುನಾವಣೆ ಗೆಲ್ಲುವ ತಂತ್ರವಾಗಿದೆ ಎಂದು ಅವರು ಹೇಳಿದ್ದಾರೆ.
ಒಂದು ವೇಳೆ ಪಿತೂರಿ ನಡೆದಿದ್ದರೆ ಸಿಬಿಐ, ಎನ್ ಐಎ, ಸಿಐಡಿಗೆ ಕರೆ ಮಾಡಬೇಕಿತ್ತು ಅಥವಾ ಎಸ್ ಐಟಿ ರಚಿಸಬೇಕಿತ್ತು. ಮಮತಾ ಬ್ಯಾನರ್ಜಿ ಏಕೆ ಇದನ್ನು ಮಾಡಲಿಲ್ಲ? ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಚೌಧರಿ, ನೆಪಗಳೊಂದಿಗೆ ಸಾರ್ವಜನಿಕರಿಂದ ಸಹಾನುಭೂತಿಯನ್ನು ಪಡೆಯಲು ಬಯಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


