ದೇಶದ ಭದ್ರತೆಗೆ ಧಕ್ಕೆ ಆರೋಪ: ಮೆಹಬೂಬಾ ಮುಫ್ತಿ ಪಾಸ್ ಪೋರ್ಟ್ ಅರ್ಜಿ ತಿರಸ್ಕೃತ!
ದೇಶದ ಭದ್ರತೆಗೆ ಧಕ್ಕೆ ತಂದ ಆರೋಪ ಹೊರಿಸಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಪಕ್ಷದ ಅಧಿ ನಾಯಕಿ ಮೆಹಬೂಬಾ ಮುಫ್ತಿ ಅವರ ಪಾಸ್ ಪೋರ್ಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಶ್ರೀನಗರ: ದೇಶದ ಭದ್ರತೆಗೆ ಧಕ್ಕೆ ತಂದ ಆರೋಪ ಹೊರಿಸಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಪಕ್ಷದ ಅಧಿ ನಾಯಕಿ ಮೆಹಬೂಬಾ ಮುಫ್ತಿ ಅವರ ಪಾಸ್ ಪೋರ್ಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಈ ಬಗ್ಗೆ ಸ್ವತಃ ಮೆಹಬೂಬಾ ಮುಫ್ತಿ ಅವರೇ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದ ಮೇರೆಗೆ ನನ್ನ ಪಾಸ್ ಪೋರ್ಟ್ ಅರ್ಜಿಯನ್ನು ಪ್ರಾಧಿಕಾರ ತಿರಸ್ಕರಿಸಿದೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಅಪರಾಧ ತನಿಖಾ ಸಂಸ್ಛೆ ಸಿಐಡಿ ನೀಡಿರುವ ವರದಿಯ ಆಧಾರದ ಮೇಲೆ ತಮ್ಮ ಪಾಸ್ ಪೋರ್ಟ್ ಅನ್ನು ತಿರಸ್ಕರಿಸಲಾಗಿದೆ ಪಾಸ್ ಪೋರ್ಟ್ ಕಚೇರಿ ಮಾಹಿತಿ ನೀಡಿದೆ ಎಂದು ಮುಫ್ತಿ ಹೇಳಿದ್ದಾರೆ. ಅಲ್ಲದೆ ಪಾಸ್ ಪೋರ್ಟ್ ಕಚೇರಿ ನೀಡಿರುವ ಪತ್ರವನ್ನೂ ಮುಫ್ತಿ ಸುದ್ದಿಗಾರರ ಮುಂದೆ ಪ್ರದರ್ಶನ ಮಾಡಿದರು.
'ಕಳೆದ ವರ್ಷ ಮೇ 31 ರಂದು ಅವರ ಪಾಸ್‌ಪೋರ್ಟ್ ಅವಧಿ ಮೀರಿದ್ದು, ಅದರ ಪ್ರಕಾರ 2020 ರ ಡಿಸೆಂಬರ್ 11 ರಂದು ಹೊಸ ಪಾಸ್‌ಪೋರ್ಟ್ ನೀಡಲು ಅರ್ಜಿ ಸಲ್ಲಿಸಿದ್ದೆ. ಆದರೆ, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕಾರಣ ನೀಡಿ ಮತ್ತು ಸಿಐಡಿ ವರದಿಯನ್ನಾಧರಿಸಿ ಪಾಸ್‌ಪೋರ್ಟ್ ನೀಡಲು ನಿರಾಕರಿಸುತ್ತಿದೆ. ಒಂದು ರಾಜ್ಯದ ಮಾಜಿ ಮುಖ್ಯಮಂತ್ರಿಗೆ ಪಾಸ್ ಪೋರ್ಟ್ ನೀಡಿದರೆ ಹೇಗೆ ದೇಶದ ಭದ್ರತೆಗೆ ಧಕ್ಕೆಯಾಗುತ್ತದೆ..? ಪಾಸ್‌ಪೋರ್ಟ್ ನೀಡುವುದು ಇಷ್ಟು ದೊಡ್ಡ ಸಾರ್ವಭೌಮತ್ವ ದೇಶಕ್ಕೆ ಹೇಗೆ ಅಪಾಯವನ್ನುಂಟು ಮಾಡುತ್ತದೆ..? ಇದು ಆಗಸ್ಟ್ 2019 ರ ನಂತರ ರಾಜ್ಯದಲ್ಲಿರುವ (ವಿಶೇಷ ಸ್ಥಾನಮಾನ ರದ್ದತಿ ಬಳಿಕ) ಸಾಮಾನ್ಯ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೆಹಬೂಬಾ ಮುಫ್ತಿ, ಕೇಂದ್ರ ಸರ್ಕಾರದ ನೀತಿಗಳಿಗೆ ವಿರೋಧಿಸಲಾಗುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪಕ್ಷಪಾತ ತೋರುತ್ತಿದೆ ಎಂದು ಹೇಳಿದರು.
ಮನಿ ಲಾಂಡರಿಂಗ್ ಅಥವಾ ಹವಾಲಾ ಹಣ ವರ್ಗಾವಣೆ ವಿಚಾರವಾಗಿ ಇಡಿ ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ವಿರುದ್ಧ ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನಡೆದಿದ್ದ ಇಡಿ ದಾಳಿಯಲ್ಲಿ ಫಾರೂಕ್ ಅಬ್ದುಲ್ಲಾ ಅವಿರಗೆ ಸೇರಿದ್ದ 12 ಕೋಟಿ ರೂ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಫಾರೂಕ್ ಅಬ್ದುಲ್ಲಾ ಹೆಸರಿದೆ ಎಂದು ಹೇಳಲಾಗಿತ್ತು. ಇದಕ್ಕೂ ಮೊದಲು ವಿಧಿ 370 ರದ್ಧತಿ ವೇಳೆ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ನಾಯಕರನ್ನೂ ಆಂತರಿಕ ಭದ್ರತೆಯ ನೆಪ ಹೇಳಿ ಗೃಹ ಬಂಧನದಲ್ಲಿರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


